ಚಿಕ್ಕಬಳ್ಳಾಪುರ: ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು (33 ವರ್ಷ) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಚಾಲಕ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ.
‘ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. ರೂ.40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ರೂ.25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.