Preparations for Varamahalakshmi festival in full swing amid soaring prices

ಗಗನಕ್ಕೇರಿದ ಬೆಲೆಗಳ ನಡುವೆ ವರಮಹಾಲಕ್ಷ್ಮೀ ಹಬ್ಬದ ಸಿದ್ಧತೆ ಜೋರು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಈ ಬಾರಿ ತಡವಾಗಿ ಮಳೆಯಾಗುತ್ತಿದ್ದು, ಹೂಗಳ ಇಳುವರಿ ಮೇಲೆ ಪ್ರಭಾವ ಬೀರಿದೆ. ವರಮಹಾಲಕ್ಷ್ಮೀ ಹಬ್ಬ (Varamahalakshmi festival) ಒಂದು ದಿನವಿದ್ದಂತೆ ಹೂವು, ಹಣ್ಣು ಹಾಗೂ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.

ತರಕಾರಿ, ಹಣ್ಣುಗಳು ಹಾಗೂ ಹೂಗಳ ಬೆಲೆ ಹಬ್ಬಕ್ಕೆಂದೇ ದುಬಾರಿಯಾಗಿ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಇದರೊಂದಿಗೆ ವರಲಕ್ಷ್ಮೀ ಮೂರ್ತಿಗಳ ಪ್ರತಿಮೆಗಳು, ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ದುಬಾರಿ ಬೆಲೆಯೆನಿಸಿವೆ.

ನಗರದ ಮಾರ್ಕೆಟ್ನವಲ್ಲಿ ಹಣ್ಣುಗಳ ನೂರಾರು ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ದೊಡ್ಡ ತೆಂಗಿನ ಕಾಯಿ ಒಂದಕ್ಕೆ 100 ರೂ ಆಗಿದೆ.

ಹೂವು ಹಣ್ಣಿನ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿವೆ. ಕಾಕಡ, ಮಲ್ಲಿಗೆ , ಮಳ್ಳೆ ಹೂವಿನ ಬೆಲೆ 1000 ರೂ, ಕನಕಾಂಬರ ಕೆ.ಜಿಗೆ 2000 ರೂ ಇದ್ದು, 50 ಗ್ರಾಂಗೆ 120ರೂನಂತೆ ಮಾರಾಟವಾಗುತ್ತಿತ್ತು. ಶಾಮಂತಿಗೆ 250ರೂ, ಬಟನ್ಸ್, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರವರೆಗೂ ಇವೆ. ಇನ್ನು ತಾವರೆ ಹೂ ಜೊತೆಗೆ 80 ರೂ, ಡೇರಾ ಒಂದು ಹೂವಿಗೆ 10 ರೂ ಇದರೊಂದಿಗೆ ಸೇಬಿನ ಬೆಲೆ 250ರೂ, ದ್ರಾಕ್ಷಿ 200ರೂ ದಾಟಿದ್ದು, ಮಿಕ್ಕ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಅಲಂಕಾರಿಕ ಹೂಗಳು ಒಂದು ಕುಚ್ಚಿಗೆ 200 ರೂಗಳಂತೆ ಮಾರಾಟವಾಗುತ್ತಿತ್ತು.

ಬಾಳೆಕಂದುಗಳು ಸಹ ತುಸು ಬೆಲೆ ಹೆಚ್ಚಾಗಿಯೇ ಇವೆ. ಆಷಾಢ ಮಾಸದಲ್ಲಿಯೂ ಸಹ ಹೂವುಗಳ ಬೆಲೆ ಅಷ್ಟೇನೂ ಇಳಿಕೆಯಾಗಿರಲಿಲ್ಲ.

ಕಡಿಮೆಯಾದ ಹೂ ಇಳುವರಿ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸೇವಂತಿಗೆ, ಗುಲಾಬಿ, ಚೆಂಡು ಹೂಗಳು ಹೆಚ್ಚಾಗಿ ಬೆಳೆಯುತ್ತಿವೆ. ಆದರೆ ಕಾಕಡ, ಮಲ್ಲಿಗೆ, ಕನಕಾಂಬರ ಹೂಗಳನ್ನು ಬೆಳೆಯುವವರೇ ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಬೇರೆಡೆಯಿಂದ ಹೂಗಳನ್ನು ತರಿಸಬೇಕಾದ ಅನಿವಾರ್ಯತೆ ಇದೆ.

ಹೂ ಕೀಳಲು ಕೂಲಿ ಕಾರ್ಮಿಕರ ಸಮಸ್ಯೆ, ನಿರ್ವಹಣೆ ವೆಚ್ಚ ಹೂ ಬೆಳೆಗಾರರ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ, ಬೆಂಗಳೂರಿನ ಮಾರುಕಟ್ಟೆಯಲ್ಲಿಯೂ ಹೂಗಳ ಬೆಲೆ ದುಬಾರಿಯಾಗಿದೆ ಎನ್ನುತ್ತಾರೆ ಹೂ ಮಾರಾಟಗಾರರು.

ಲಕ್ಷ್ಮೀ ಅಲಂಕೃತ ಮೂರ್ತಿಗಳು

ವರಮಹಾಲಕ್ಷ್ಮೀ ಹಬ್ಬ ಹದಿನೈದು ದಿನವಿದ್ದಂತೆ ವಿವಿಧ ಮಳಿಗೆಗಳಲ್ಲಿ ಲಕ್ಷ್ಮೀ ಅಲಂಕೃತ ಮೂರ್ತಿಗಳು ಹಾಗೂ ಲಕ್ಷ್ಮೀ ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಒಂದು ಸೆಟ್ ಪೂರ್ಣ ಪ್ರತಿಮೆಗೆ 3 ಸಾವಿರದಿಂದ 10 ಸಾವಿರದವರೆಗೆ ಮಾರಾಟವಾಗುತ್ತಿದೆ. ಈ ಬಾರಿ ಹೆಚ್ಚಿನ ಮೂರ್ತಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಲಕ್ಷ್ಮೀ ಕಳಸಕ್ಕೆ ಇಡುವ ಲಕ್ಷ್ಮೀ ಮುಖವಾಡಗಳನ್ನು ಮಹಿಳೆಯರು ಕೊಂಡೊಯ್ಯುತ್ತಿದ್ದುದು ಸಾಮಾನ್ಯವಾಗಿದೆ.

ಪ್ಲಾಸ್ಟಿಕ್ ಹೂಗಳು, ಅಲಂಕಾರಿಕ ಸಾಮಗ್ರಿಗಳ ಮಾರಾಟ ಸಹ ಭರದಿಂದ ಸಾಗಿದೆ.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!