ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ದಿನವೇ ಕನ್ನಡ ಚಿತ್ರರಂಗದ ಖ್ಯಾತ ನಟ ನಾಯಕ ದಿವಂಗತ ಡಾ.ವಿಷ್ಣುವರ್ಧನ್ (Dr. Vishnuvardhan) ಅವರ ಅಭಿಮಾನಿಗಳು ಕಣ್ಣೀರು ಹಾಕುವಂತ ಘಟನೆ ನಡೆದಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಅಭಿಮಾನ್ ಸ್ಟುಡಿಯೊದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವು ಮಾಡಲಾಗಿರುವುದು ಅಭಿಮಾನಿಗಳು ಕಣ್ಣೀರಿಗೆ ಕಾರಣ.
ಇನ್ನೂ ರಾತ್ರೋರಾತ್ರಿ ಸಮಾಧಿ ತೆರವು ವಿರೋಧಿಸಿ, ವಿಷ್ಣುವರ್ಧನ್ ಅಭಿಮಾನಿಗಳು ಸ್ಟುಡಿಯೊ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ರಾತ್ರೋರಾತ್ರಿ ಸಮಾಧಿಯನ್ನು ತೆರವು ಮಾಡಲಾಗಿದೆ ಎಂದು ಕಣ್ಣೀರು ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಸ್ಟುಡಿಯೊದ ಒಳಗೆ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಹಾಗೂ ಅಭಿಮಾನಿಗಳ ಮಧ್ಯೆ ತಳ್ಳಾಟ ನಡೆದಿದೆ ಎಂದು ವರದಿಯಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.