Vote rigging: Rahul Gandhi has 5 questions for the Election Commission..!

ಇಂಡಿಯಾ ಟುಡೆ ಫ್ಯಾಕ್ಟ್ ಚೆಕ್ ವರದಿಯಲ್ಲಿ ರಾಹುಲ್ ಗಾಂಧಿ ಆರೋಪ ಸಾಬೀತು..!| Video

ಬೆಂಗಳೂರು: “ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿತು. ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಅನ್ಯಾಯದ ವಿರುದ್ಧ ಹೋರಾಡಿ, ಮತದಾನದ ಹಕ್ಕು ರಕ್ಷಣೆ ಮಾಡಿಕೊಳ್ಳಲು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಾವು ಇಂದು ಪ್ರತಿಭಟನೆ ನಡೆಸಿದ್ದೆವು. ಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು, ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ಮೂಲಕ ಬರುವುದು ಬೇಡ ಎಂದು ತೀರ್ಮಾನಿಸಿ ಪಕ್ಷದ ವತಿಯಿಂದ ಕೆಲವು ನಾಯಕರಷ್ಟೇ ಆಗಮಿಸಿದ್ದೇವೆ. ಚುನಾವಣೆಯಲ್ಲಿ ಹೇಗೆ ಅನ್ಯಾಯವಾಗಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಇದು ರಾಜ್ಯದ ಉದ್ದಗಲಕ್ಕೆ ನಡೆದಿರುವ ಅನ್ಯಾಯ. ನಾವು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಅಧ್ಯಯನ ಮಾಡಿದ್ದೇವೆ. ನಾವು ಐದಾರು ಪ್ರದೇಶಗಳನ್ನು ಪ್ರಸ್ತಾಪಿಸಿ, ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ” ಎಂದರು.

“ಆಯೋಗಕ್ಕೆ ನಾವು ಮಹದೇವಪುರ ಹಾಗೂ ಗಾಂಧಿನಗರದ ಮಾದರಿಗಳನ್ನು ನಾವು ಸಲ್ಲಿಕೆ ಮಾಡಿಲ್ಲ. ನಿನ್ನೆ ಮಾಧ್ಯಮಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ್ದು ಕೇವಲ ಉದಾಹರಣೆ. ರಾಜ್ಯದ ಕೆಲವು ಭಾಗಗಳಲ್ಲಿ ಈ ರೀತಿ ಅನ್ಯಾಯವಾಗಿದ್ದು, ಎಲ್ಲಾ ಕಡೆ ಪರಿಶೀಲನೆ ಮಾಡಿ ಈ ಅಕ್ರಮವನ್ನು ಪತ್ತೆಹಚ್ಚಬೇಕು. ಈ ಅಕ್ರಮದಲ್ಲಿ ಭಾಗಿಯಾಗಿರುವ ರಿಟರ್ನಿಂಗ್ ಅಧಿಕಾರಿ, ಬಿಎಲ್ಒ ಸೇರಿದಂತೆ ಯಾರೇ ಆಗಿದ್ದರೂ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದೇವೆ” ಎಂದು ಮಾಹಿತಿ ನೀಡಿದರು.

“ಒಂದೇ ಮತದಾರರ ಹೆಸರನ್ನು ಐದು ಕಡೆ ಸೇರಿಸುವುದು, ಮನೆ ವಿಳಾಸ ಇಲ್ಲದೆ ಮತಪಟ್ಟಿಯಲ್ಲಿ ಸೇರಿಸುವುದು, ಖಾಲಿ ನಿವೇಶನಗಳ ವಿಳಾಸದಲ್ಲಿ ನಕಲಿ ಮತ ಸೇರಿಸುವುದು, ಮತಗಳನ್ನು ಪಕ್ಕದ ಬೂತ್ ಗಳಿಗೆ ವರ್ಗಾಯಿಸಿ ಅಕ್ರಮ ಎಸಗಿರುವುದಕ್ಕೆ ಸಾಕಷ್ಟು ದಾಖಲೆಗಳಿವೆ. ಹೀಗಾಗಿ ನಾವು ಆಯೋಗಕ್ಕೆ 8-10 ಅಂಶಗಳನ್ನು ಹಾಕಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮತದಾರರ ಪಟ್ಟಿಯ ಡಿಜಿಟಲ್ ಮಾದರಿ ಸೇರಿದಂತೆ ನಮಗೆ ಯಾವ ರೀತಿ ಮಾಹಿತಿ ಬೇಕು ಎಂದು ಆಯೋಗಕ್ಕೆ ಕೇಳಿದ್ದೇವೆಯೇ ಹೊರತು, ನಾವು ಸಂಪೂರ್ಣ ವಿವರವನ್ನು ನೀಡಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಆಯೋಗದ ಅಧಿಕಾರಿಗಳು ಅಕ್ರಮ ಪರಿಶೀಲನೆಗೆ ಮುಂದಾಗಿರುವುದು ಸ್ವಾಗತಾರ್ಹ

“ಚುನಾವಣಾ ಆಯೋಗಕ್ಕೆ ಹೊಸದಾಗಿ ಬಂದಿರುವ ಅನ್ಬುಕುಮಾರ್ ಅವರು ಪರಿಶೀಲನೆ ಆರಂಭಿಸಿರುವುದಾಗಿ ನಮಗೆ ತಿಳಿಸಿದರು. ಅವರ ಕ್ರಮ ಸ್ವಾಗತಾರ್ಹ. ಯಾವ ಕ್ಷೇತ್ರಗಳಲ್ಲಿ ಏನೆಲ್ಲಾ ಅನ್ಯಾಯ ಆಗಿದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ವಿಚಾರ ತಿಳಿಸುತ್ತೇವೆ. ಇದು ಕೇವಲ ಕರ್ನಾಟಕ ಅಥವಾ ಮಹದೇವಪುರಕ್ಕೆ ಸೀಮಿತವಾದ ಹೋರಾಟವಲ್ಲ” ಎಂದು ತಿಳಿಸಿದರು.

“ನಿಮ್ಮದೇ ಸರ್ಕಾರ, ನಿಮ್ಮದೇ ಅಧಿಕಾರಿ ಎಂದು ಕೆಲವರಲ್ಲಿ ಪ್ರಶ್ನೆ ಮೂಡಬಹುದು. ಎಲ್ಲಾ ನಿಯಂತ್ರಣ ಆಯೋಗದ ಕೈಯಲ್ಲಿ ಇರಲಿದೆ. ಕಂಪ್ಯೂಟರ್ ನಲ್ಲಿ ನನ್ನ ಹೆಸರು ಹಾಕಿದರೆ, ನನ್ನ ಹೆಸರಲ್ಲಿ ಎಷ್ಟು ಕಡೆ ಮತ ಇದೆ ಎಂದು ಗೊತ್ತಾಗುತ್ತದೆ. ಇದನ್ನು ಪರಿಶೀಲಿಸುವಷ್ಟು ಸೌಜನ್ಯ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಇರಬೇಕು. ಹೀಗಾಗಿ ನಾವು ಅವರ ಗಮನ ಸೆಳೆದಿದ್ದೇವೆ. ಇಡೀ ದೇಶದಲ್ಲಿ ಇದು ವ್ಯಾಪಕ ಚರ್ಚೆ ಆಗಬೇಕಿದೆ. ಈ ನಿಟ್ಟಿನಲ್ಲಿ ನಾವು ಪ್ರತಿಭಟನೆ ನಡೆಸಿದ್ದು, ಮುಂದಿನ ದಿನಗಳಲ್ಲಿ, ಇದನ್ನು ಮುಂದುವರಿಸುತ್ತೇವೆ” ಎಂದರು.

ರಾಹುಲ್ ಗಾಂಧಿ ಅವರಿಂದ ಅಫಿಡವಿಟ್ ಬೇಕು ಎಂಬ ಆಯೋಗದ ಹೇಳಿಕೆ ಬಗ್ಗೆ ಕೇಳಿದಾಗ, “ಯಾವ ಅಫಿಡವಿಟ್ ಬೇಕು? ನಾನು, ರಾಹುಲ್ ಗಾಂಧಿ ಅವರೇ ಅಫಿಡವಿಟ್. ಚುನಾವಣೆಗೆ ಸ್ಪರ್ಧಿಸುವಾಗ, ಗೆದ್ದ ನಂತರ ನಮ್ಮಿಂದ ಅಫಿಡವಿಟ್ ತೆಗೆದುಕೊಂಡ ಮೇಲೆ ನಮ್ಮ ಮಾತಿಗಿಂತ ಇನ್ನೇನು ಅಫಿಡವಿಟ್ ಬೇಕು? ನಾವು ಸುಳ್ಳು ಹೇಳಿದ್ದರೆ, ಗಲ್ಲಿಗೆ ಹಾಕಿ. ರಾಹುಲ್ ಗಾಂಧಿ ಅವರ ಆರೋಪವನ್ನು ಆಯೋಗದವರು ನಿರಾಕರಿಸಿದ್ದಾರಾ? ಅವರು ಅಫಿಡವಿಟ್ ಕೇಳಿದ ಕಾರಣಕ್ಕೆ ನಾವು ಅವರಿಂದ ಮಾಹಿತಿ ಬಯಸುತ್ತಿದ್ದೇವೆ. ನಾವು ಪಡೆದಿರುವ ಮಾಹಿತಿ ಆರ್ ಟಿಐ ಮೂಲಕ ಸಂಗ್ರಹಿಸಿರುವ ಮಾಹಿತಿ” ಎಂದು ತಿಳಿಸಿದರು.

ಅಕ್ರಮ ಎಲ್ಲೇ ಆಗಲಿ, ಯಾರೇ ಮಾಡಲಿ, ತಪ್ಪು ತಪ್ಪೇ

ಅರವಿಂದ ಲಿಂಬಾವಳಿ ಅವರು ಚಾಮರಾಜಪೇಟೆ, ವರುಣಾ ಕ್ಷೇತ್ರಗಳಲ್ಲಿ ಡಬಲ್ ಎನ್ ರೋಲ್ ಆಗಿರುವ ಬಗ್ಗೆ ಮಾಹಿತಿ ನೀಡಿರುವ ಬಗ್ಗೆ ಕೇಳಿದಾಗ, “ವರುಣಾ, ಚಾಮರಾಜಪೇಟೆ, ಕನಕಪುರ ಯಾವುದೇ ಕ್ಷೇತ್ರ ಇರಲಿ. ಈ ತಪ್ಪು ಎಲ್ಲಾದರೂ ತಪ್ಪೆ. ಕ್ರಮ ಕೈಗೊಳ್ಳಲಿ. ಸಂವಿಧಾನದ ಆಶಯ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕು” ಎಂದು ತಿಳಿಸಿದರು.

ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ನಾಯಕರ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ನಮ್ಮ ಹೋರಾಟ ಏನಿದ್ದರೂ ಚುನಾವಣಾ ಆಯೋಗದ ವಿರುದ್ಧ. ಅವರು ಒಂದು ಪಕ್ಷದ ಧ್ವನಿಯಾಗಿ ಕೆಲಸ ಮಾಡಬಾರದು ಎಂಬುದು ನಮ್ಮ ಹೋರಾಟ” ಎಂದು ತಿಳಿಸಿದರು.

ನನ್ನ ಕ್ಷೇತ್ರದ ಎರಡು ವಿಧಾಸಭಾ ಕ್ಷೇತ್ರದಲ್ಲಿ ಈ ರೀತಿ ಆಗಿದೆ ಎಂಬ ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ಹಿಂದೆಯೇ ಕೇಂದ್ರ ಚುನಾವಣಾ ಆಯೋಗಕ್ಕೆ ಹೋಗಿ ಮಾಹಿತಿ ಸಮೇತ ಪತ್ರ ಬರೆದಿದ್ದರು. ಅದರ ದಾಖಲೆ ನನ್ನ ಬಳಿ ಇದೆ. ಆದರೆ ಆಯೋಗ ಆ ಪತ್ರವನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ” ಎಂದರು.

ಸಂಪೂರ್ಣ ವಿವರವನ್ನು ಯಾವಾಗ ನೀಡುತ್ತೀರಿ ಎಂದು ಕೇಳಿದಾಗ, “ನಾವು ಆಯೋಗದಿಂದ ಕೆಲವು ಮಾಹಿತಿಗಳನ್ನು ಕೇಳಿದ್ದು, ಅವರು ಮಾಹಿತಿ ಕೊಡಲಿ” ಎಂದರು.

ಇಂಡಿಯಾ ಟುಡೆ ಫ್ಯಾಕ್ಟ್ ಚೆಕ್ ಗೆ ಅಭಿನಂದನೆ

ಇಂಡಿಯಾ ಟುಡೆ ಮಾಡಿರುವ ಫ್ಯಾಕ್ಟ್ ಚೆಕ್ ವರದಿಯಲ್ಲಿ ರಾಹುಲ್ ಗಾಂಧಿ ಅವರ ಆರೋಪ ಸಾಬೀತಾಗಿರುವುದರ ಬಗ್ಗೆ ಕೇಳಿದಾಗ, “ನಾನು ಮೊದಲು ಇಂಡಿಯಾ ಟುಡೆ ಮಾಧ್ಯಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮಾಧ್ಯಮಗಳು ಕೂಡ ಪ್ರಜಾಪ್ರಭುತ್ವದ ಭಾಗ. ನಾವೆಲ್ಲರೂ ಸೇರಿ ಇದನ್ನು ಉಳಿಸಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ನಿಮ್ಮ ಕಾರ್ಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣಾ ಆಯೋಗಕ್ಕೆ ಆಕ್ಷೇಪಣೆ ಹಾಕಲು ಈಗ ಕಾಲ ಮೀರಿದೆ ಎಂಬ ಅರಿವು ನಮಗಿದೆ. ಆದರೆ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದರು.

ಕೆಲವು ರಾಜ್ಯಗಳ ಚುನಾವಣಾ ಆಯೋಗದ ವೆಬ್ ಸೈಟ್ ಬಂದ್ ಆಗಿರುವ ಬಗ್ಗೆ ಕೇಳಿದಾಗ, “ಇದು ಎಲ್ಲಾ ರಾಜಕೀಯ ಪಕ್ಷಗಳು ಕಣ್ತೆರೆಸುವ ವಿಚಾರ. ಇದು ಒಂದು ಪಕ್ಷದ ಸಮಸ್ಯೆಯಲ್ಲ. ಇದು ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಸಮಸ್ಯೆ. ನಾವು ಮತಗಳನ್ನು ರಕ್ಷಿಸಿ, ಮತದಾನದ ಹಕ್ಕನ್ನು ರಕ್ಷಿಸಿ, ಮತದಾರರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರ ಆರೋಪ ನಿರಾಧಾರ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡುತ್ತಿಲ್ಲ. ನಾವು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದೇವೆ. ಅವರು ಏನಾದರೂ ಟೀಕೆ ಮಾಡಲಿ. ನಾವು ನಮ್ಮ ಕರ್ತವ್ಯ ನಿಭಾಯಿಸುತ್ತೇವೆ” ಎಂದರು.

ನಿಮ್ಮ ಆರೋಪಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದೇಕೆ ಎಂದು ಕೇಳಿದಾಗ, “ಬಿಜೆಪಿ ನಾಯಕರ ಈ ವರ್ತನೆ ಅವರು ಈ ಅಕ್ರಮದಲ್ಲಿ ಭಾಗಿಯಾಗಿರುವುದನ್ನು ತೋರಿಸುತ್ತಿದೆ” ಎಂದು ತಿರುಗೇಟು ನೀಡಿದರು.

ರಾಜಕೀಯ

ದೊಡ್ಡಬಳ್ಳಾಪುರ: ರಘುರಾಮ್‌ರಂತೆ ಅವಧಿ ಪೂರ್ಣಗೊಳಿಸದ ಭಾಸ್ಕರ್ ಅಕಾಲಿಕ ಸಾವು..!

ದೊಡ್ಡಬಳ್ಳಾಪುರ: ರಘುರಾಮ್‌ರಂತೆ ಅವಧಿ ಪೂರ್ಣಗೊಳಿಸದ ಭಾಸ್ಕರ್ ಅಕಾಲಿಕ ಸಾವು..!

ಹೇಮಾವತಿ ಪೇಟೆಯ ನಗರಸಭೆ ಸದಸ್ಯರಾಗಿದ್ದ ಕೆ.ಜಿ.ರಘುರಾಮ್ (ತಿಮ್ಮಣ್ಣ) ಅವರ ಅಕಾಲಿಕ ಮರಣದ ಕಾರಣ ಅದೇ ವಾರ್ಡ್ನಲ್ಲಿ ಭಾಸ್ಕರ್ (Bhaskar) ಅವರು ಅಚ್ಚರಿಯ ಅಭ್ಯರ್ಥಿ ಎಂಬಂತೆ ಸ್ಪರ್ಧೆ ಮಾಡಿ ವಿಜೇತರಾಗುವ

[ccc_my_favorite_select_button post_id="112427"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!