Dr. Vishnavardhan's grave cleared: Kiccha Sudeep Kidi

ಡಾ.ವಿಷ್ಣುವರ್ಧನ್ ಸಮಾಧಿ ತೆರವು: ಕಿಚ್ಚ ಸುದೀಪ್ ಕಿಡಿ| Video ನೋಡಿ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಅಭಿಮಾನ್ ಸ್ಟುಡಿಯೊದಲ್ಲಿದ್ದ ಸಾಸಹ ಸಿಂಹ ಡಾ.ವಿಷ್ಣುವರ್ಧನ್ (Dr. Vishnuvardhan) ಅವರ ಸಮಾಧಿ ತೆರವು ಮಾಡಿರುವ ಕುರಿತಂತೆ ನಟ ಕಿಚ್ಚ ಸುದೀಪ್ (Kiccha Sudeep) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮತ್ತು ಬರವಣಿಗೆ ಮೂಲಕ ಸುದೀಪ್ ಸಮಾಧಿ ತೆರವು ಮಾಡಿರುವುದು ಹೇಡಿತನದ ಕೃತ್ಯ ಎಂದು ಖಂಡಿಸಿದ್ದಾರೆ

ಸುದೀಪ್ ಬರಹ: ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ.

ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು.

ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ.

ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ.

ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ.

ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ.

ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು.

ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ.

ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ.

ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ.

ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ; ನಿಮ್ಮ ಪ್ರೀತಿಯ ಕಿಚ್ಚ.

ರಾಜಕೀಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="112351"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!