Law Department investigating vote rigging: Cmsiddaramaiah

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.

ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು ಎಂದರು.

ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು.

ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ

ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ

ಬಿಜೆಪಿಯವರು ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ.

ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು.

ಚುನಾವಣೆಗಳಲ್ಲಿ ಕೈವಾಡ

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ, ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಮುಖ್ಯಮಂತ್ರಿಗಳು ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ ಎಂದರು.

ಪೀಟರ್ ವೀಕ್ಷಕರಾಗಿದ್ದರು ಅದಕ್ಕೆ ಸಿದ್ದರಾಮಯ್ಯ ಗೆದ್ದರು ಎಂದು ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಲ್ಲದೇ ಹೋಗಿದ್ದರೆ ನನ್ನನ್ನು ಸೋಲಿಸುತ್ತಿದ್ದರು ಎಂದರು.

ರಾಜಕೀಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="112351"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!