ಬೆಂಗಳೂರು: ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಮಿಸಿದ್ದು, ನಮ್ಮ ಮೆಟ್ರೋ ಉದ್ಘಾಟನೆಯೊಂದಿಗೆ ವಂದೇ ಭಾರತ್ ಮೂರು ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಎಚ್‌ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಮೋದಿಯವರನ್ನು ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್, ಪೊಲೀಸ್ ಮಹಾ ನಿರ್ದೇಶಕ ಸಲೀಂ ಸೇರಿದಂತೆ ಮತ್ತಿತರರು ಬರಮಾಡಿಕೊಂಡರು.

ಎಚ್‌ಎಎಲ್ ವಿಮಾನನಿಲ್ದಾಣದಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ಮೇಖಿ ಸರ್ಕಲ್‌ನಲ್ಲಿರುವ ಎಚ್‌ಕ್ಯೂಟಿಸಿ ಕೇಂದ್ರಕ್ಕೆ ಆಗಮಿಸಿದರು.
ಈ ವೇಳೆ ಅವರನ್ನು ರಾಜ್ಯಪಾಲ ಗೆಹೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಮಾಡಿಕೊಂಡರು.

ಹೊರಗಡೆ ವಿಶೇಷ ವಾಹನದಲ್ಲಿ ಬರುತ್ತಿದ್ದಂತೆ ಬೆಳಿಗ್ಗಿನಿಂದಲೇ ಸಾವಿರಾರು ಸಂಖ್ಯೆಯಲ್ಲಿ ಜಮಾ ವಹಿಸಿದ್ದ ಬಿಜೆಪಿಯ ಕಾರ್ಯಕರ್ತರು ಮೋದಿಗೆ ಜೈಕಾರ ಹಾಕಿದರು.
ಈ ನಮ್ಮ ಮೆಟ್ರೋದ ಹಳದಿ ಮಾರ್ಗದ ‘ಕ್ರೆಡಿಟ್’ ವಾರ್ ಜೋರಾಗಿರುವುದರಿಂದ, ಭಾನುವಾರ ಅಧಿಕೃತ ಕಾರ್ಯಕ್ರಮದಲ್ಲಿ ಮೋದಿ ಭಾಷಣ ಕ್ಕಾಗಿ ಎಲ್ಲರೂ ಕುತೂಹಲ ದಿಂದ ಕಾಯುತ್ತಿದ್ದಾರೆ.
ಎರಡು ದಿನಗಳ ಹಿಂದಷ್ಟೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳತನ ಆರೋಪದ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಇಂದು ನಡೆಯುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸುತ್ತಿರುವುದು, ಬಿಜೆಪಿಗರಿಗೆ ಬೇಸರಕ್ಕೆ ಕಾರಣವಾಗಿದೆ.