ಬೆಂಗಳೂರು: ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಉದ್ಘಾಟನೆಯೊಂದಿಗೆ ವಂದೇ ಭಾರತ್ ಮೂರು ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಬಿಜೆಪಿ ಸಿದ್ದಗೊಂಡಿದ್ದರೆ, ಕಾಂಗ್ರೆಸ್ ಸರಕಾರ ‘ಶಿಷ್ಟಾಚಾರ’ದಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚನೆ ನೀಡಿದೆ.
ಈ ನಮ್ಮ ಮೆಟ್ರೋದ ಹಳದಿ ಮಾರ್ಗದ ‘ಕ್ರೆಡಿಟ್’ ವಾರ್ ಜೋರಾಗಿರುವುದರಿಂದ, ಭಾನುವಾರ ಅಧಿಕೃತ ಕಾರ್ಯಕ್ರಮದಲ್ಲಿ ಮೋದಿ ಜೊತೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.
ಎರಡು ದಿನಗಳ ಹಿಂದಷ್ಟೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳತನ ಆರೋಪದ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಇಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಹಾಗೂ ಡಿಸಿಎಂ ಭಾಗವಹಿಸುವುದು ಖಚಿತವಾಗಿದ್ದು, ಬಿಜೆಪಿಗರಲ್ಲಿ ನಿರಾಸೆಗೆ ಕಾರಣವಾಗಿದೆ.