ರಾಜಣ್ಣಗೆ ಮುಳುವಾದ ಲೂಸ್ ಟಾಕ್: ಡಿ.ಕೆ.ಶಿವಕುಮಾರ್ ತಲೆಗೆ ಕಟ್ಟಲು ಆರ್. ಅಶೋಕ ಸರ್ಕಸ್

Loose talk that got Rajanna into trouble

ಬೆಂಗಳೂರು: ಸೆಪ್ಟೆಂಬ‌ರ್ ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಏನುತ್ತಿದ್ದ ಕೆ.ಎನ್. ರಾಜಣ್ಣ ಆಗಸ್ಟ್ ತಿಂಗಳಲ್ಲಿಯೇ ಸಚಿವ ಸಂಪುಟದಿಂದ ವಜಾಗೊಳ್ಳುವ ಮೂಲಕ ಕ್ರಾಂತಿ ಗೀತೆ ಹಾಡುವ ಮುನ್ನವೇ ತಮ್ಮ ಲೂಸ್ ಟಾಕ್‌ಗಳಿಗೆ ಬೆಲೆ ತೆತ್ತಿದ್ದಾರೆ ಎನ್ನುವ ವಿಶ್ಲೇಷಣೆಗಳು ಆರಂಭವಾಗಿದೆ.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಹೇಳಿಕೆಯಿಂದ ಪಕಕ್ಕೆ ಹಾಗೂ ಸರಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದ ರಾಜಣ್ಣ ಅವರ ವಿರುದ್ಧ ಪಕ್ಷದೊಳಗೆ ತೀವ್ರ ಆಕ್ಷೇಪವಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ದಲಿತ ನಾಯಕ ಎನ್ನುವ ಕಾರಣಕ್ಕೆ ಎಚ್ಚರಿಕೆ ಹೊರತಾಗಿ ಯಾವುದೇ ಕ್ರಮವಹಿಸಲು ಸಾಧ್ಯವಾಗಿರಲಿಲ್ಲ.

ಆದರೀಗ ಕೆಲ ಖಾಸಗಿ ಚಾನಲ್‌ಗಳ ಟ್ರ್ಯಾಪ್ ಪ್ರಶ್ನೆಗಳಿಗೆ ಸಿಲುಕಿ ಸ್ವತಃ ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನೇ ಟೀಕಿಸಿದ್ದರಿಂದ ಸಂಪುಟದಿಂದಲೇ ವಜಾಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗುತ್ತದೆ.

ಕೆ.ಎನ್. ರಾಜಣ್ಣ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು

ಇನ್ನೂ ಕೆಲ ಖಾಸಗಿ ಚಾನಲ್ಗಳು ಲೋಗೋ ಹಿಡಿದು ವಿವಾತ್ಮವಾಗಿ ತಮಗೆ ಬೇಕಾದಂತ ಪ್ರಶ್ನೆಗಳಿಗೆ ರಾಜಣ್ಣರಿಂದ ಪ್ರತಿಕ್ರಿಯೆ ಪಡೆದು ಸೆನ್ಷೇನ್ ಸೃಷ್ಟಿಸುತ್ತಿದ್ದದ್ದು ಎಲ್ಲರಿಗೂ ತಿಳಿದಿರುವ ವಿಷಯ.

ಅಂತೆಯೇ ಚಾನಲ್ ವರದಿಗಾರರ ಪ್ರಶ್ನೆಗಳಿಗೆ ಸಿಲುಕಿದ ರಾಜಣ್ಣ ಅವರು ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ ದೊಡ್ಡ ರಾಜಕೀಯ ಕ್ರಾಂತಿ ಸಂಭವಿಸಲಿದೆ. ಆಗ ಸಚಿವ ಸಂಪುಟ ಬದಲಾವಣೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ 5 ವರ್ಷ ಸಿಎಂ ಆಗಿರುತ್ತಾರೆ. ಸಿಎಂ ಹುದ್ದೆ ರಾಜ್ಯದಲ್ಲಿ ಖಾಲಿ ಇಲ್ಲ.

2028ಕ್ಕೂ ಸಿದ್ದರಾಮಯ್ಯ ಅವರದ್ದೇ ನಾಯಕತ್ವ, ಅವರೇ ಸಿಎಂ

ಡಿಸಿಎಂ ಸ್ಥಾನ ಎಂದರೆ ತಲೆ ಮೇಲೆ ಕಿರೀಟ ಇರೊಲ್ಲ. ಕೆಪಿಸಿಸಿ ಅಧ್ಯಕ್ಷಸ್ಥಾನದಿಂದ ಡಿ.ಕೆ. ಶಿವಕುಮಾರ್ ಅವರನ್ನು ಬದಲಾಯಿಸಬೇಕು.

ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಶಾಸಕರು, ಸಚಿವರ, ಅಧಿಕಾರಿಗಳ ಸಭೆ ನಡೆಸಿದ್ದರ ವಿರುದ್ದ ಬಹಿರಂಗವಾಗಿ ಆಕ್ರೋಶ.

ರಾಜ್ಯದ 48 ರಾಜಕೀಯ ನಾಯಕರ ವಿರುದ್ದ ಹನಿಟ್ರ್ಯಾಪ್ ಮಾಡಲಾಗಿದೆ, ರಾಜ್ಯದಲ್ಲಿ ಸಮುದಾಯಕ್ಕೆ ಒಬ್ಬರಂತೆ 5 ಡಿಸಿಎಂ ಹುದ್ದೆ ಸೃಷ್ಟಿಸಬೇಕು, ನನ್ನ ವಿರುದ್ಧ ಹನಿಟ್ರಾಪ್ ಮಾಡಲಾಗಿದೆ ಎಂದು ರಾಜಣ್ಣ ದೂರನ್ನು ನೀಡಿದ್ದರು. ಆದರೆ ಅದು ತನಿಖೆಯಲ್ಲಿ ಸುಳ್ಳಾಯಿತು.

ವರಿಷ್ಠರಿಗೆ ತಪ್ಪು ಗ್ರಹಿಕೆ

ಸಚಿವ ಸಂಪುಟದಿಂದ ವಜಾಗೊಂಡಿದ್ದರ ಹಿಂದೆ ಕೆಲ ನಾಯಕರ ಪಿತೂರಿ ನಡೆಸಿದ್ದು ಯಾರು ಎಂದು ಕಾಲ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ವಜಾಗೊಂಡ ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಅಲ್ಲದೆ, ತಮ್ಮನ್ನು ಸಂಪುಟದಿಂದ ವಜಾ ಮಾಡುವುದು ಹೈಕಮಾಂಡ್ ತೀರ್ಮಾನ. ಅದನ್ನು ನಾನು ಒಪ್ಪಿದ್ದೇನೆ. ಹೈಮಾಂಡ್ ನಿರ್ಧಾರವನ್ನು ಪ್ರಶ್ನಿಸಲು ಹೋ ಗುವುದಿಲ್ಲ. ಹೈಕಮಾಂಡ್‌ಗೆ ಮುಜುಗರವಾಗಲು ನಾನು ಬಯಸುವುದಿಲ್ಲ ಎಂದೂ ಹೇಳಿದ್ದಾರೆ.

ಮಜತೆಗೆ, ಹೈಕಮಾಂಡ್ ವರಿಷ್ಠರು ನನ್ನ ಬಗ್ಗೆ ತಪ್ಪು ತಿಳುವಳಿಕೆ ಬರು ವಂತೆ ಮಾಡಲಾಗಿದೆ. ಹೀಗಾಗಿ ಸಂಪುಟದ ಸಹೋದ್ಯೋಗಿಗಳ ಜತೆಗೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವೆ.

ಡಿ.ಕೆ.ಶಿವಕುಮಾರ್ ತಲೆಗೆ ಕಟ್ಟಲು ಬಿಜೆಪಿ ಯತ್ನ

ಬಸನಗೌಡ ಪಾಟೀಲ್ ಯತ್ನಾಳ್ ಅವರ ಲೂಸ್ ಟಾಕ್‌ನಿಂದ ಇಕ್ಕಟ್ಟಿಗೆ ಸಿಲುಕಿ, ವರಿಷ್ಠರಿಗೆ ಮುಗಿಬಿದ್ದು ಉಚ್ಛಾಟನೆ ಮಾಡಿಸಿದ ಬಿಜೆಪಿ ರಾಜ್ಯದ ಮುಖಂಡರು, ಈಗ ಕೆ.ಎನ್.ರಾಜಣ್ಣ ಪ್ರಕರಣವನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಕುರಿತಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರ ಖುರ್ಚಿಯ ಎರಡು ಕಾಲು ಮುರಿದ್ದಿದ್ದಾರೆ, ಇನ್ನೆರಡು ಕಾಲು ಮುರಿದರೆ ಸಿಎಂ ಸ್ಥಾನ ಬಿದ್ದು ಹೋಗುತ್ತದೆ ಎಂದು ಲೇವಡಿ ಮಾಡಿ, ರಾಜಣ್ಣ ಪ್ರಕರಣವನ್ನು ಡಿ.ಕೆ.ಶಿವಕುಮಾರ್ ತಲೆ ಕಟ್ಟಲು ಯತ್ನಿಸಿದ್ದಾರೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]