ದೊಡ್ಡಬಳ್ಳಾಪುರ: ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ (Lecturer) ಕರ್ತವ್ಯ ನಿರ್ವಹಿಸುತ್ತಿದ್ದ ಪ್ರವೀಣ್ (45 ವರ್ಷ)ನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಂಗಾಡಿಯಪ್ಪ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿಯನ್ನು ಪ್ರೀತಿಸಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ. ಹಾಗೆಯೇ ವರದಕ್ಷಿಣೆ ಕಿರುಕುಳ ನೀಡಿದ್ದಾನೆ ಎಂದು ಶಿಕ್ಷಕ ಪ್ರವೀಣ್ ಪತ್ನಿ ನೀಡಿದ್ದ ದೂರಿನ ಅನ್ವಯ ಪ್ರವೀಣ್ ಎಂಬಾತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕನ ಮೊದಲ ಪತ್ನಿ ಠಾಣೆಗೆ ದೂರು ಕೊಟ್ಟ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿದೆ.
ಮೊದಲನೆ ಹೆಂಡತಿಗೆ ಇಬ್ಬರು ಮಕ್ಕಳಿದ್ದು, ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಹೆಂಡತಿ ಆರೋಪಿಸಿ ಮಹಿಳಾ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.