ಸದನದಲ್ಲಿ ಕೋಲಾಹಲ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Uproar in the House: DCM D.K. Shivakumar attacks

ಬೆಂಗಳೂರು: “ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹರಿಹಾಯ್ದರು.

ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು ಅಂಕಿ ಅಂಶಗಳನ್ನು ನೀಡಿದ ಕಾರಣ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸರಿ ಅಂಕಿ-ಅಂಶಗಳ ಸ್ಪಷ್ಟನೆ ನೀಡಲು ಮುಂದಾದರು. ಈ ವೇಳೆ ಅಶ್ವತ್ ನಾರಾಯಣ ಅವರು ಮಧ್ಯಪ್ರವೇಶಿಸಿ ವಾಗ್ವಾದ ಆರಂಭಿಸಿದರು. ಆಗ ಸಚಿವ ಕೆ.ಜೆ ಜಾರ್ಜ್ ಅವರು, ‘ಸುಳ್ಳು ಹೇಳಬೇಡಿ’ ಎಂದು ಹೇಳಿದಾಗ, ಅಶ್ವತ್ಥ್ ನಾರಾಯಣ ಅವರು, ‘ಸ್ಮಾರ್ಟ್ ಮೀಟರ್ ವಿಚಾರವಾಗಿ ಮಾತನಾಡಲು ನಿಮಗೆ ಧಮ್, ಯೋಗ್ಯತೆ ಇಲ್ಲ, ನೀವು ಅಸಮರ್ಥ’ ಎಂದು ಟೀಕೆ ಮಾಡಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಅಸಮರ್ಥರು ಅವರಲ್ಲ. ನೀವು ಅಸಮರ್ಥರು. ರಾಜ್ಯದ ಜನ ಮತ ನೀಡಿ ಅಧಿಕಾರ ನಡೆಸಲು ಅವಕಾಶ ನೀಡಿರುವ ಜಾರ್ಜ್ ಅವರು ಅಸಮರ್ಥರಲ್ಲ, ನೀವು ಅಸಮರ್ಥರಾಗಿರುವ ಕಾರಣ ನಿಮ್ಮ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ” ಎಂದು ತಿರುಗೇಟು ನೀಡಿದರು.

ಈ ವೇಳೆ ಅಶ್ವತ್ ನಾರಾಯಣ ಅವರು “ಈ ಸರ್ಕಾರ ಅಸಮರ್ಥ, ಜನವಿರೋಧಿ, ಭ್ರಷ್ಟಾಚಾರ ಸರ್ಕಾರ” ಎಂದರು.

ಇದಕ್ಕೆ ತಿರುಗೇಟು ನೀಡಿದ ಶಿವಕುಮಾರ್ ಅವರು, “ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ನಿಮ್ಮ ಭ್ರಷ್ಟಾಚಾರದಿಂದಲೇ ನಾವು 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ನೀನು ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬಂದಿದ್ಯಲ್ಲ.., ಆಗ ನಿನಗೆ ಡೆಪಾಸಿಟ್ ಕೂಡ ಬರಲಿಲ್ಲ. ರಾಮನಗರದಲ್ಲಿ 1 ಸೀಟ್ ಕೂಡ ಬರಲಿಲ್ಲ. ನೀನು ನಿಜವಾದ ಅಸಮರ್ಥ” ಎಂದು ಕೆಂಡಾ- ಮಂಡಲರಾದರು.

ಈ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ವಾದ ಹೆಚ್ಚಾದ ಕಾರಣ ಸ್ಪೀಕರ್ ಅವರು ಕಲಾಪವನ್ನು ಅಲ್ಪ ಅವಧಿಗೆ ಮುಂದೂಡಿದರು.

ಆತ್ಮಗೌರವಕ್ಕೆ ಧಕ್ಕೆ ಆದರೆ ಸಹಿಸಲು ಆಗುವುದಿಲ್ಲ

“ಕೆ ಜೆ ಜಾರ್ಜ್ ನಮ್ಮ ನಾಯಕರು, ಅವರಿಗೆ ಅಪಮಾನವಾದರೆ ಸಹಿಸುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ನಮ್ಮ ನಾಯಕನಿಗೆ ಆಗುವ ಅಪಮಾನ ನೋಡಿಕೊಂಡು ಸುಮ್ಮನಿದ್ದರೆ ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು.

ವಿಧಾನಸಭೆ ಕಲಾಪ ವಾಗ್ವಾದ ಬಳಿಕ ಮತ್ತೆ ಆರಂಭವಾದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನವನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು.

“ನಾನು 10 ಚುನಾವಣೆಯನ್ನು ಎದುರಿಸಿದ್ದು 8 ಬಾರಿ ಶಾಸಕನಾಗಿ ಇಲ್ಲಿದ್ದೇನೆ. ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ದೇವೇಗೌಡರು, ಬೊಮ್ಮಾಯಿ, ಜೆ.ಹೆಚ್ ಪಟೇಲರು, ಯಡಿಯೂರಪ್ಪನವರು, ಎಸ್.ಎಂ ಕೃಷ್ಣ, ಬಂಗಾರಪ್ಪ, ಬಸವಲಿಂಗಪ್ಪ, ಕೆ.ಹೆಚ್ ರಂಗನಾಥ್, ಕೆ.ಹೆಚ್ ಪಾಟೀಲ್ ರಂತಹ ಮೇಧಾವಿಗಳ ಜೊತೆ ಕೆಲಸ ಮಾಡಿದ್ದೇನೆ. ವಿರೋಧ ಪಕ್ಷಗಳಲ್ಲಿ ಎಂ.ಸಿ. ನಾಣಯ್ಯ, ಚಂದ್ರೇಗೌಡರು ಸೇರಿದಂತೆ ಅನೇಕರು ಇದ್ದರು” ಎಂದು ಸ್ಮರಿಸಿದರು.

ನಮಗೂ ಬಿಸಿ ರಕ್ತ ಇದೆ

“ನಮಲ್ಲೂ ಬಿಸಿರಕ್ತ ಇದೆ. ಆದರೆ ಅದನ್ನು ಎಲ್ಲಿ ಉಪಯೋಗಿಸಬೇಕೋ ಅಲ್ಲಿ ಬಳಸಬೇಕು. ಅದನ್ನು ಸದನದ ಹೊರಗೆ ಇಟ್ಟುಕೊಳ್ಳಬೇಕು. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನಾನು ಆರಂಭದಲ್ಲಿ ಪದವೀಧರನಲ್ಲ. ನಾನು ಪದವಿ ಪಡೆದಿದ್ದು ನನ್ನ 47ನೇ ವಯಸ್ಸಿಗೆ. ನನಗೆ ದೊಡ್ಡ ಶಿಕ್ಷಣ ಹಿನ್ನಲೆ ಇಲ್ಲದಿದ್ದರೂ ಬೇರೆಯವರನ್ನು ನೋಡಿ, ಅನುಭವದಿಂದ ಕಲಿತಿದ್ದೇನೆ. ಅನುಭವದ ಮೇಲೆ ನಾವು ಇಲ್ಲಿಯವರೆಗೂ ಬಂದಿದ್ದೇವೆ. ಯಾವುದೇ ಮನುಷ್ಯ ತನ್ನ ಸ್ವಾಭಿಮಾನಕ್ಕೆ, ಆತ್ಮಗೌರವಕ್ಕೆ ಧಕ್ಕೆಯಾದಾಗ ಅದನ್ನು ಸಹಿಸುವುದಿಲ್ಲ” ಎಂದರು.

ಪಕ್ಷದ ಅಧ್ಯಕ್ಷನಾಗಿ ನಮ್ಮ ನಾಯಕರ ಪರ ನಿಲ್ಲುವುದು ನನ್ನ ಕರ್ತವ್ಯ

“ನಾನು ಜಾರ್ಜ್ ಅವರ ಕೆಳಗೆ ಕೆಲಸ ಮಾಡಿದ್ದೇನೆ. ಅವರು ಅಧ್ಯಕ್ಷರಾಗಿದ್ದಾಗ ಅವರ ಜೊತೆ ಕೆಲಸ ಮಾಡಿದ್ದೇನೆ. ಅವರು ರಾಜ್ಯಾಧ್ಯಕ್ಷರಾಗಿದ್ದಾಗ ನಾನು ತಾಲೂಕು ಅಧ್ಯಕ್ಷನಾಗಿದ್ದೆ. ಅವರು ನಮ್ಮ ನಾಯಕ. ನಾನು ಪಕ್ಷದ ಅಧ್ಯಕ್ಷನಾಗಿ ಅವರ ಪರ ನಿಲ್ಲುವುದು ನನ್ನ ಕರ್ತವ್ಯ. ಹೀಗಾಗಿ ನಾನು ಆವೇಶದಲ್ಲಿ ಮಾತನಾಡಬೇಕಾಯಿತು” ಎಂದು ವಿವರಿಸಿದರು.

“ನಾನು ಆಡಿರುವ ಮಾತುಗಳು ಸರಿಯಾಗಿರಬಹುದು ಅಥವಾ ತಪ್ಪಾಗಿರಬಹುದು. ನನ್ನ ಆವೇಶ, ಭಾಷೆ ತಪ್ಪಾಗಿರಬಹುದು. ಅದನ್ನು ಸರಿ ಎಂದು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಆದರೆ ನಾನು ಕೂಡ ಮನುಷ್ಯ. ಸಾರ್ವಜನಿಕ ಜೀವನದಲ್ಲಿ ನನಗೆ ನನ್ನದೇ ಆದ ಸಾಮರ್ಥ್ಯವಿದೆ. ನನ್ನದೇ ಆದ ಸಂಘಟನೆ ಶಕ್ತಿ, ಮಾತಿನ ಕಲೆ, ಅನುಭವ ಇದೆ. ಹಾಗೆಂದ ಮಾತ್ರಕ್ಕೆ ನಾವು ದೊಡ್ಡವರಾಗಿರಲಿ, ಚಿಕ್ಕವರಾಗಿರಲಿ ಯಾರನ್ನೂ ನೋಯಿಸಬಾರದು. ವಿರೋಧ ಪಕ್ಷದಲ್ಲಿರುವವರು ಕೂಡ ತಮ್ಮದೇ ಆದ ಅನುಭವದಲ್ಲಿ ಸಾಧನೆ ಮಾಡಿ ಇಲ್ಲಿಗೆ ಬಂದಿರುತ್ತಾರೆ. ಈ ಸದನಕ್ಕೆ ಬಂದಿರುವ ಪ್ರತಿಯೊಬ್ಬ ಸದಸ್ಯರಿಗೂ ನಾವು ಸೂಕ್ತ ಗೌರವ ನೀಡಲೇಬೇಕು” ಎಂದರು.

“ಇಲ್ಲಿಗೆ ಕೇವಲ ಹಣದ ಹಿನ್ನೆಲೆಯಿಂದ ಬರುವುದಕ್ಕೆ ಆಗುವುದಿಲ್ಲ. ನನ್ನ ಸ್ನೇಹಿತ ಶಿವಳ್ಳಿ ಆಶ್ರಯ ನಿವೇಶನದ ಮನೆಯಲ್ಲಿದ್ದ. ಆತ ಕೂಡ ಈ ಸದನದ ಸದಸ್ಯನಾಗಿದ್ದ. ಚಪ್ಪಲಿ ಹಾಕದೇ ಇರುವವರೂ ಇಲ್ಲಿಗೆ ಬಂದಿದ್ದಾರೆ. ಜನ ನಮ್ಮನ್ನು ಆರಿಸಿ ಈ ಸದನಕ್ಕೆ ಕಳುಹಿಸಿರುವುದು ನಮ್ಮ ಭಾಗ್ಯ. ಇಂತಹ ಸಂದರ್ಭದಲ್ಲಿ ಜನ ನಮ್ಮನ್ನು ನೋಡುತ್ತಿರುತ್ತಾರೆ. ಸ್ಪೀಕರ್ ಅವರು ನ್ಯಾಯಾಧೀಶರ ಸ್ಥಾನದಲ್ಲಿ ಕೂತಿದ್ದು ನೀವು ಯಾರಿಗೆ ಆದರೂ ಕಠಿಣವಾಗಿ ಹೇಳಬಹುದು. ನ್ಯಾಯಧೀಶ ಸ್ಥಾನದಿಂದ ಅನ್ಯಾಯ ಆಗಬಾರದು. ನಾವು ತಪ್ಪು ಮಾಡಿದರೆ ನಮ್ಮನ್ನು ಸಸ್ಪೆಂಡ್ ಮಾಡಿ. ತೊಂದರೆ ಇಲ್ಲ. ಆದರೆ ಯಾರ ಆತ್ಮ ಗೌರವಕ್ಕೂ ಧಕ್ಕೆ ಆಗದಂತೆ ಕಾಪಾಡಿ ಎಂದು ಮನವಿ ಮಾಡುತ್ತೇನೆ” ಎಂದು ವಿನಂತಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]