ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಪ್ರಕರಣದ ಕುರಿತು ನಟ ದರ್ಶನ್ (Darshan ) ಮತ್ತು ಸಂಗಡಿಗರಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿರುವ ಬೆನ್ನಲ್ಲೇ ಇದೀಗ ಮಾಜಿ ಸಂಸದೆ ರಮ್ಯಾ ( Ramya ) ಪೋಸ್ಟ್ ಹಾಕಿ ಕುಟುಕಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ. “ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ. ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಹಾಕಿದ್ದಾರೆ. ಹಾಗೆಯೇ ಸುಪ್ರೀಂಕೋರ್ಟ್ ಹೊರಡಿಸಿದ ಆದೇಶದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ಬರೆದಿದ್ದಾರೆ.