ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕೆ ಅಭಿಯಾನ: ಸದುಪಯೋಗಕ್ಕೆ ಕರೆ

Special mediation campaign at Doddaballapura court: Call for good use

ದೊಡ್ಡಬಳ್ಳಾಪುರ: ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಶೀರ್ಷಿಕೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 01 ರಿಂದ ಅಕ್ಟೋಬರ್ 07ರ ವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ (Campaign) ಹಮ್ಮಿಕೊಳ್ಳಲಾಗಿದೆ.

ಪ್ರಕರಣದ ಶೀಘ್ರ ಇತ್ಯರ್ಥ ಇಬ್ಬರು ಪಕ್ಷದಾರರೂ ಸಹ ಗೆಲುವಿನ ಸಮಾಧಾನ ಪಡೆದುಕೊಳ್ಳುವಲ್ಲಿ ಈ ಅಭಿಯಾನ ನೆರವಾಗಲಿದ್ದು, ಪಕ್ಷಗಾರರು ಈ ಅಭಿಯಾನದ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ತಾಲೂಕು ಸದಸ್ಯ ಕಾರ್‍ಯದರ್ಶಿ ದಾಸರಿ ಕ್ರಾಂತಿ ಕಿರಣ್ ತಿಳಿಸಿದರು.

ನಗರದ ನ್ಯಾಯಾಲಯದ ತಾಲೂಕು ವಕೀಲರ ಸಂಘದ ಕಾರ್‍ಯಾಲಯ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಧ್ಯಸ್ಥಿಕೆಯು ನ್ಯಾಯಾಲಯಗಳಲ್ಲಿ ನಡೆಯುವ ಪ್ರಕ್ರಿಯೆಗಳಿಗಿಂತ ಭಿನ್ನವಾಗಿರಲಿದೆ. ಸಾಮಾನ್ಯವಾಗಿ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣಗಳಲ್ಲಿ ವಕೀಲರು ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷಿಗಳು, ದಾಖಲೆಗಲನ್ನು ಪರಿಗಣಿಸಲಾಗುತ್ತದೆ. ಆದರೆ ಮಧ್ಯಸ್ಥಿಕೆ ಅಭಿಯಾನದಲ್ಲಿ ಪ್ರಕರಣಕ್ಕೆ ಸಂಬಂಧಪಡದ, ಕಾನೂನು ಸೇವೆಗಳ ಪ್ರಾಧಿಕಾರದಿಂದ ತರಬೇತಿ ಪಡೆದ ಅಕೃತ ವ್ಯಕ್ತಿಯು ಮಧ್ಯಸ್ಥಿಕೆ ವಹಿಸಿದ್ದು, ಇವರು, ಕಾನೂನು ಹಾಗೂ ಪ್ರಕರಣಗಳ ವಿಚಾರದಲ್ಲಿ ಪರಿಣಿತಿ ಹೊಂದಿರುತ್ತಾರೆ. ಅವರು ಪಕ್ಷದಾರರ ಮಧ್ಯಸ್ಥಿಕೆ ಮಾಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪ್ರಕರಣ ಇತ್ಯರ್ಥಗೊಳಿಸಲು ಸೂಚಿಸುತ್ತಾರೆ.

60 ದಿನಗಳ ಕಾಲಾವಕಾಶದಲ್ಲಿ ಇಬ್ಬರೂ ಪಕ್ಷಗಾರರು ಒಪ್ಪಿದ್ದಲ್ಲಿ ಈ ಪ್ರಕರಣ ಸುಲಭವಾಗಿ ಇರ್ಥವಾಗಿ, ಶೀಘ್ರ ನ್ಯಾಯ ದೊರೆಯುತ್ತದೆ. ಕಡಿಮೆ ಅವಧಿ, ಕಡಿಮೆ ಖರ್ಚಿನಲ್ಲಿ ನ್ಯಾಯ ದೊರೆಯಲಿದ್ದು, ಇಬ್ಬರೂ ಪಕ್ಷಗಾರರು ಗೆಲ್ಲುವ ಅವಕಾಶವಿದೆ.

ಮಧ್ಯಸ್ಥಿಕೆದಾರನು ವಿವಾದವಿರುವ ಇಬ್ಬರು ಪಕ್ಷಗಾರರ ಮೇಲೆ ತನ್ನ ನಿರ್ಧಾರವನ್ನು ಹೇರುವುದಿಲ್ಲ ಮತ್ತು ನಿರ್ಧಾರವನ್ನು ಒಪ್ಪಿಕೊಳ್ಳುವಂತೆ ಒತ್ತಾಯಪಡಿಸುವುದಿಲ್ಲ. ಮಧ್ಯಸ್ಥಿಕೆದಾರನು ಇಬ್ಬರು ಪಕ್ಷಗಾರರ ಒಮ್ಮತದ ನಿರ್ಧಾರವನ್ನು ಒಪ್ಪಂದ ಪತ್ರದಲ್ಲಿ ನಮೂದಿಸಿ, ಅದರ ಮೇಲೆ ಇಬ್ಬರು ಪಕ್ಷಗಾರರ ಸಹಿಗಳನ್ನು ಪಡೆದು ನ್ಯಾಯಾಲಯಕ್ಕೆ ಸಲ್ಲಿಸುತ್ತಾನೆ.

ಒಪ್ಪಂದ ಪತ್ರದಲ್ಲಿರುವ ಷರತ್ತುಗಳು ಕಾನೂನಿಗೆ ಪೂರಕವಾಗಿದ್ದರೆ ನ್ಯಾಯಾಲಯ ಒಪ್ಪಂದ ಪತ್ರವನ್ನು ಅಂಗೀಕರಿಸಿ ತೀರ್ಪನ್ನು ನೀಡುತ್ತದೆ. ಒಪ್ಪಂದ ಪತ್ರದಲ್ಲಿರುವ ಯಾವುದೇ ಅಂಶ ಕಾನೂನಿಗೆ ವಿರುದ್ಧವಾಗಿದ್ದರೆ ಅಥವಾ ಪಕ್ಷಗಾರರ ಗಮನಕ್ಕೆ ತರದೇ ತಯಾರಿಸಿದ್ದರೆ ನ್ಯಾಯಾಲಯ ಅಂತಹ ಒಪ್ಪಂದ ಪತ್ರವನ್ನು ತಿರಸ್ಕರಿಸಬಹುದು.

ನ್ಯಾಯಾಲಯದಲ್ಲಿರುವ ಬಾಕಿ ಇರುವ ಪ್ರಕರಣವನ್ನು ಯಾವುದೇ ಹಂತದಲ್ಲಿ ಮಧ್ಯಸ್ಥಿಕೆಗೆ ಕಳುಹಿಸಬಹುದು. ಇಬ್ಬರು ಪಕ್ಷಗಾರರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುತ್ತದೆ. ಪರಸ್ಪರ ಸಂವಹನದ ಮೂಲಕ ಪೂರಕ ವಾತಾವರಣವನ್ನು ನಿರ್ಮಿಸಿ ಅತಿ ಶೀಘ್ರವಾಗಿ ಹಾಗೂ ಅಂತಿಮ ಪ್ರಕರಣವನ್ನು ಸಂವಹನದ ಮೂಲಕ ಇತ್ಯರ್ಥಗೊಳಿಸಲು ಮಧ್ಯಸ್ಥಿಕೆ ಪ್ರಕ್ರಿಯೆ ಒಂದು ಸುವರ್ಣ ಅವಕಾಶವಾಗಿದೆ ಎಂದರು.

ಪ್ರಕರಣಗಳು: ವೈವಾಹಿಕ ಪ್ರಕರಣಗಳು, ಕೌಟಂಬಿಕ ದೌರ್ಜನ್ಯದ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು, ನೌಕರರ ಸೇವಾ ವಿಷಯಕ್ಕೆ ಸಂಬಂಸಿದ ಪ್ರಕರಣಗಳು, ರಾಜಿ ಆಗಬಹುದಾದಂತಹ ಅಪರಾಧ ಪ್ರಕರಣಗಳು, ಗ್ರಾಹಕರ ಪರಿಹಾರದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಕರಣದ ಪ್ರಕರಣಗಳು, ಪಾಲು ವಿಭಾಗ ಪ್ರಕರಣಗಳು, ಮನೆ ಬಾಡಿಗೆ ಅಥವಾ ಬಾಡಿಗೆದಾರನನ್ನು ಹೊರಹಾಕುವಿಕೆಗೆ ಸಂಬಂಧಿಸಿದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಇತರೆ ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ತಾಲೂಕಿನಲ್ಲಿ ಈವರೆಗೆ 43 ಪ್ರಕರಣಗಳು ವಿಶೇಷ ಮಧ್ಯಸ್ಥಿಕೆ ಮೂಲಕ ಬಂದಿದ್ದು, ಈವರೆಗೆ 15 ಪ್ರಕರಣಗಳು ಇತ್ಯರ್ಥವಾಗಿವೆ ಎಂದರು.

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ ಮಾತನಾಡಿ, ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವದಲ್ಲಿ ನಮ್ಮ ಹಕ್ಕು ಬಾದ್ಯತೆಗಳ ಉಳಿವಿಗಾಗಿ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಸೇವೆಗಳನ್ನು ನೀಡುತ್ತಿದೆ. ಈ ದಿಸೆಯಲ್ಲಿ ವಿಶೇಷ ಮಧ್ಯಸ್ಥಿಕೆ ಅಭಿಯಾನ ರಾಷ್ಟ್ರವ್ಯಾಪ್ತಿ ನಡೆಯುತ್ತಿದೆ. ನ್ಯಾಯಾಲಯದಲ್ಲಿ ವಕೀಲರಂತೆ ಪ್ರಜೆಗಳ ಪಾತ್ರವೂ ಮುಖ್ಯವಾಗಿದೆ. ಅಭಿಯಾನದ ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.

ಸುದ್ಧಿಗೋಷ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಜಂಟಿ ಕಾರ್ಯದರ್ಶಿ ವಿಜಯಕುಮಾರ್, ಖಜಾಂಚಿ ಎಂ.ಮುನಿರಾಜು ಹಾಗೂ ಪದಾಧಿಕಾರಿಗಳು ಇದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]