ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

There is a big conspiracy against Dharmasthala: DCM D.K. Shivakumar

ಬೆಂಗಳೂರು: “ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು.

“ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ ವಿಚಾರಗಳ ಬಗ್ಗೆ ಅರಿವಿದೆ. ಈ ಪ್ರಕರಣದಲ್ಲಿ ಪರಿಸ್ಥಿತಿ ಏನಿದೆ ಎಂದು ಗೃಹ ಸಚಿವರು ವಿವರಣೆ ನೀಡುತ್ತಾರೆ. ನಮಗೆ ಈ ಪ್ರಕರಣದ ವಿಚಾರ ಗೊತ್ತಿದೆ. ಆದರೆ ಸರ್ಕಾರ ಎಸ್ಐಟಿ ರಚಿಸಲು ಕಾರಣವೇನು ಎಂಬುದನ್ನು ವಿವರಿಸುತ್ತಾರೆ. ಈ ವಿಚಾರವಾಗಿ ಇಲ್ಲಿ ನಾವು ನಾಲ್ಕು ಜನ ಮಾತನಾಡುವುದಷ್ಟೇ ಅಲ್ಲ. ಲಕ್ಷಾಂತರ ಭಕ್ತಾದಿಗಳು ಈ ಕ್ಷೇತ್ರ ನಂಬಿದ್ದಾರೆ. ದೇಶದಲ್ಲಿ ಅನ್ನ ದಾಸೋಹ ಆರಂಭವಾಗದೇ ಇದ್ದ ಕಾಲದಲ್ಲೇ ಈ ಕ್ಷೇತ್ರದಲ್ಲಿ ಇದನ್ನು ಆರಂಭಿಸಲಾಗಿತ್ತು. ಈ ವಿಚಾರವನ್ನು ನೀವು ರಾಜಕೀಯವಾಗಿ ತಿರುಗಿಸಬೇಡಿ” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಹೈಕಮಾಂಡ್ ಎಂದು ಎಳೆದು ತರಬೇಡಿ. ಈ ಪ್ರಕರಣದಲ್ಲಿ ಕಾಂಗ್ರೆಸ್ ಯಾಕೆ ಹಸ್ತಕ್ಷೇಪ ಮಾಡುತ್ತದೆ. ಅಲ್ಲಿನ ಆಂತರಿಕ ಸಮಸ್ಯೆಯಿಂದ ಯಾವನೋ ಒಬ್ಬ ಬಂದು ಆರೋಪ ಮಾಡಿದ್ದಾನೆ. ನಿಮಗಿಂತ ಹೆಚ್ಚಾಗಿ ನಮ್ಮ ಪಕ್ಷದಲ್ಲೇ ಶಿವಲಿಂಗೇಗೌಡರು, ಅಶೋಕ್ ರೈ ಸೇರಿದಂತೆ ಅನೇಕ ಶಾಸಕರು ಧರ್ಮಸ್ಥಳ ಕ್ಷೇತ್ರದ ಬಗ್ಗೆ ಧ್ವನಿ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ನಂಬಿಕೆ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ ನಾಶವಾಗಬಾರದು. ಧರ್ಮಾಧಿಕಾರಿಗಳು ಮೊದಲಿನಿಂದಲೂ ಸಾಮಾಜಿಕ ಸೇವೆ, ಧಾರ್ಮಿಕ ಸೇವೆ ಮಾಡಿಕೊಂಡು ಬರುತ್ತಿದ್ದು, ಅವರ ಮೇಲೆ ನಮಗೆ ಯಾವುದೇ ಅನುಮಾನವಿಲ್ಲ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅವರ ಧಾರ್ಮಿಕ ಕೆಲಸಗಳ ಬೆನ್ನಿಗೆ ನಿಲ್ಲಲು ಬದ್ಧವಾಗಿದೆ. ಕೆಲವರು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೃಹ ಸಚಿವರಾಗಲಿ, ಸರ್ಕಾರವಾಗಲಿ ಸುಮ್ಮನೆ ಕೂರಲು ಸಾಧ್ಯವೇ? ಇದೆಲ್ಲವನ್ನು ಗೃಹ ಸಚಿವರು ವಿವರಿಸುತ್ತಾರೆ. ಧರ್ಮಸ್ಥಳದ ವಿರೇಂದ್ರ ಹೆಗಡೆ, ಅವರ ಪರಂಪರೆ, ದೇವಸ್ಥಾನ, ಧರ್ಮ, ಧಾರ್ಮಿಕ ವಿಚಾರದ ಬಗ್ಗೆ ನಮಗೆ ನಿಮಗಿಂತಲೂ ಹೆಚ್ಚು ಕಾಳಜಿ ನಮಗಿದೆ” ಎಂದು ತಿಳಿಸಿದರು.

ನಂತರ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ “ನೂರಾರು ವರ್ಷದಿಂದ ಬಂದ ಪರಂಪರೆ ನಾಶ ಮಾಡಲು ಹೊರಟಿದ್ದಾರೆ. ಯಾರನ್ನೇ ಆಗಲಿ ಅನಗತ್ಯವಾಗಿ ತೇಜೋವಧೆ ಮಾಡುವುದು ಸರಿಯಲ್ಲ. ನಮಗೆ ನಮ್ಮದೇ ಆದ ನಂಬಿಕೆ ಇದೆ. ನಾವು ಸರ್ಕಾರದ ವತಿಯಿಂದ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದ್ದೇವೆ. ಅವನ್ಯಾರೋ ಮುಸುಕುಧಾರಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಪರಿಣಾಮ ಇದೆಲ್ಲ ಆಗಿದೆ” ಎಂದು ತಿಳಿಸಿದರು.

“ನಮ್ಮ ಶಾಸಕಾಂಗ ಸಭೆಯಲ್ಲಿ ನಮ್ಮ ನಾಯಕರಾದ ಶಿವಲಿಂಗೇಗೌಡರು, ಬೇಳೂರು ಗೋಪಾಲಕೃಷ್ಣ, ಅಶೋಕ್ ರೈ ಸೇರಿ ಎಲ್ಲವೂ ಈ ವಿಚಾರವಾಗಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅಪಪ್ರಚಾರ ಮಾಡಿ ದಾರಿ ತಪ್ಪಿಸುತ್ತಿದ್ದಾರೋ ಅವರ ವಿರುದ್ಧ ತನಿಖೆ ಮಾಡಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇನೆ. ಮುಖ್ಯಮಂತ್ರಿಗಳು ಕೂಡ ಇಂತಹವರ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಗೃಹ ಸಚಿವರು ಸದನದಲ್ಲಿ ವಿವರ ನೀಡುತ್ತಾರೆ” ಎಂದರು.

“ಈ ಪ್ರಕರಣ ಸಂಪೂರ್ಣ ಮಾಹಿತಿ ನನಗೂ ಗೊತ್ತಿದೆ. ಇದು ಖಾಲಿ ಟ್ರಂಕ್. ಹೀಗಾಗಿ ಸದ್ದು ಜಾಸ್ತಿ ಮಾಡುತ್ತಿದೆ ಅಷ್ಟೇ. ಯಾವುದೇ ಧರ್ಮದ ಭಾವನಗೆ ಚ್ಯುತಿ ಬರಬಾರದು. ಯಾರು ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ಆಗಬೇಕು. ತಪ್ಪುಮಾಡಿದವರ ರಕ್ಷಣೆ ಮಾಡುವುದಿಲ್ಲ. ಏನೂ ಇಲ್ಲದೇ ಈ ರೀತಿ ಸೃಷ್ಟಿ ಮಾಡಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಬಂದ ನಂತರ ಇದನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಎಂದು ಎಸ್ಐಟಿ ರಚಿಸಿ ತನಿಖೆ ಮಡಿಸಲಾಗಿದೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರದೇ ಆದ ವ್ಯಾಖ್ಯಾನ ಮಾಡಿದ್ದಾರೆ. ಈ ವಿಚಾರದಲ್ಲಿ ಧರ್ಮಾಧಿಕಾರಿಗಳಿಗೆ ಅನ್ಯಾಯ ಆಗಿದೆ” ಎಂದು ಹೇಳಿದರು.

ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯಲು ಪ್ರಯತ್ನಿಲಾಗುತ್ತಿದೆ ಎಂದು ಬಿಜೆಪಿಯವರು ಕಾಂಗ್ರೆಸ್ ಮೇಲೆ ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಯಾವುದೇ ಸಂದರ್ಭದಲ್ಲಿ ಧರ್ಮಸ್ಥಳ ಅಥವಾ ಇತರೆ ಧಾರ್ಮಿಕ ಕ್ಷೇತ್ರಗಳ ಗೌರವ, ಸ್ವಾಭಿಮಾನ, ನಂಬಿಕೆಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ. ನ್ಯಾಯ, ಧರ್ಮದ ವಿಚಾರದಲ್ಲಿ ನಾವು ಎಲ್ಲರನ್ನು ಸರಿಸಮನಾಗಿ ನೋಡುತ್ತೇವೆ” ಎಂದು ತಿಳಿಸಿದರು.

ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬಗ್ಗೆ ಕೇಳಿದಾಗ, “ನನಗೆ ಈಗಷ್ಟೇ ಈ ವಿಚಾರ ತಿಳಿಯಿತು. ಮುಖ್ಯಮಂತ್ರಿಗಳು ಸದನದ ವೇಳೆ ಈ ವಿಚಾರ ತಿಳಿಸಿದರು. ನನಗೆ ಶಾಕ್ ಆಯಿತು. ನ್ಯಾಯಾಲಯದ ತೀರ್ಪಿನ ಬಗ್ಗೆ ನಾವು ಮಾತನಾಡಲು ಬರುವುದಿಲ್ಲ” ಎಂದು ತಿಳಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]