ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕಯೋರ್ವ ಹತ್ಯೆ ಆರೋಪದ ಪ್ರಕರಣದಲ್ಲಿ ನಟ ದರ್ಶನ್ (Darshan), ಪವಿತ್ರ ಗೌಡ (Pavitra Gowda) ಸೇರಿದಂತೆ ಪ್ರಮುಖ ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಗುರುವಾರ) ತೀರ್ಪು ನೀಡುವ ನಿರೀಕ್ಷೆ ಇದೆ.
ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಅವರ ಪೀಠ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಕುರಿತಂತೆ ದರ್ಶನ್ ಪರ ವಕೀಲರು ಮನವರಿಕೆ ಮಾಡಿದ್ದರು.
ಆದಾಗ್ಯೂ ದರ್ಶನ್ ಅವರ ಜಾಮೀನು ಭವಿಷ್ಯದ ಬಗ್ಗೆ ತೀವ್ರ ಕುತೂಹಲ ನಿರ್ಮಾಣವಾಗಿದೆ.
ಈಗಾಗಲೆ ದರ್ಶನ್, ಪವಿತ್ರಾಗೌಡ ಮತ್ತು ಇತರ ಆರೋಪಿಗಳ ಹಾಗೂ ರಾಜ್ಯ ಸರಕಾರದ ವಾದ-ಪ್ರತಿವಾದವನ್ನು ಆಲಿಸಿ ರುವ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಇದೇ ಕಾರಣಕ್ಕೆ ದರ್ಶನ್ ಪರ ವಕೀಲರು ಜಾಮೀನು ರದ್ದು ಮಾಡದಿರಲು ಲಿಖಿತ ಕಾರಣಗಳನ್ನು ನೀಡಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಇದರ ನಡುವೆ ಪವಿತ್ರ ಗೌಡ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ಗಮನ ಸೆಳೆಯುತ್ತಿದೆ.
ಇದರಲ್ಲಿ “ಸತ್ಯವು ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಮತ್ತು ಯಾವಾಗಲೂ ನ್ಯಾಯವನ್ನು ದೊರೆಕಿಸುತ್ತದೆ”.
“ಸತ್ಯವು ಈ ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಿನ ಶಕ್ತಿಯನ್ನು ಹೊಂದಿದೆ. ಎಷ್ಟೇ ಸಮಯ ತೆಗೆದುಕೊಂಡರೂ, ನ್ಯಾಯವು ಯಾವಾಗಲೂ ತನ್ನ ದಾರಿಯನ್ನು ಕಂಡುಕೊಳ್ಳುತ್ತದೆ ಮತ್ತು ನೀಡುತ್ತದೆ”. (the truth is more powerful than anything. and justice will always be served”.
“The truth holds greater power than anything else in this world. No matter how long it takes, justice will always find its way and be served”.) ಎಂದು ಪೋಸ್ಟ್ ಮಾಡಿದ್ದಾರೆ.