ಬೆಂಗಳೂರು: “ಸಿಲಿಂಡರ್ ಸ್ಪೋಟದಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸಾರ್ವಜನಿಕರು ಜಾಗ್ರತೆಯಿಂದ ಇರಬೇಕು, ನಿಮ್ಮ ಜೊತೆ ನಾವಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಭರವಸೆ ನೀಡಿದರು.
ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ಹಾನಿಗೊಂಡ ಮನೆಗಳನ್ನು ಮರು ನಿರ್ಮಾಣ ಮಾಡಿಕೊಡಲಾಗುವುದು ಹಾಗೂ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಯಾವ ಕಾರಣಕ್ಕೆ ಘಟನೆ ನಡೆದಿದೆ ಎಂದು ಪೊಲೀಸರು ತನಿಖೆ ನಡೆಸಲಿದ್ದಾರೆ” ಎಂದು ಹೇಳಿದರು.
ಬೆಂಗಳೂರಿನಲ್ಲಿ ಹೆಚ್ಚು ಸಿಲಿಂಡರ್ ಸ್ಫೋಟಗಳು ಉಂಟಾಗುತ್ತಿವೆ. ಕಾಳಸಂತೆಯಲ್ಲಿ ಅಡುಗೆ ಸಿಲಿಂಡರ್ ಮಾರಾಟ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಇದೆಲ್ಲದರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಅನಿಲ ಸೋರಿಕೆಯಾಗಿ ಅನಾಹುತ ನಡೆದಿದೆ. ಭವಿಷ್ಯದಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸಲು ಪರಿಹಾರ ಕಂಡು ಹಿಡಿಯಲು ನಾವು ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.