Doddaballapur: 79th Independence Day celebrations at MSV Public School.. Children who attracted attention

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ.. ಗಮನ ಸೆಳೆದ ಕಾರ್ಯಕ್ರಮಗಳು

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರದ ನಗರಸಭೆಯ ಮಾಜಿ ಉಪಾಧ್ಯಕ್ಷ ಡಿ.ವಿ.ನಾರಾಯಣ ಶರ್ಮಾರವರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, “ಭಾರತದ ಮೇಲೆ ದಾಳಿ ಮಾಡಿದ ಅನೇಕ ವಿದೇಶೀಯರ ಬಗ್ಗೆ, ಅವರು ಭಾರತದ ಮೇಲೆ ನಡೆಸಿದ ನಿರಂತರ ದಾಳಿ, ಅದರಿಂದ ಭಾರತಕ್ಕೆ ಆದ ನಷ್ಟ ಹಾಗೂ ನಮ್ಮ ವೀರರ ಹೋರಾಟ – ತ್ಯಾಗ ಬಲಿದಾನಗಳ ಬಗ್ಗೆ, ಅದರಿಂದ ನಾವು ಪಡೆದ ಸ್ವಾತಂತ್ರ ಎಂದು ತಿಳಿಸಿದರು.

ಜೊತೆಗೆ ಚಂದ್ರಶೇಖರ ಆಜ಼ಾದರ ಧೈರ್ಯ, ಸಾಹಸಗಳನ್ನು ಕೊಂಡಾಡಿದರು. ನಾವೆಲ್ಲರೂ ಭಾರತಾಂಬೆಯ ಮಕ್ಕಳು ಯಾವುದೇ ದ್ವೇಷ, ತಾರತಮ್ಯಗಳಿಲ್ಲದೆ ಒಗ್ಗಟ್ಟಿನಿಂದ ಬದುಕಿ ಬಾಳಬೇಕು ಎಂಬ ಸಂದೇಶವನ್ನು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಎ. ಸುಬ್ರಮಣ್ಯ ಅವರು ಮಾತನಾಡಿ, “ಸ್ವಾತಂತ್ರ್ಯ ಸಂಗ್ರಾಮವನ್ನು ಸ್ವತಃ ಅನುಭವಿಸಿದ ಹಾಗೂ ತುರ್ತುಪರಿಸ್ಥಿತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ನಾರಾಯಣ ಶರ್ಮ ಅವರ ಕಾಣಿಕೆ ನಮ್ಮೆಲ್ಲರಿಗೂ ಆದರ್ಶಪ್ರಾಯ. ಇಂತಹ ಮೇರು ವ್ಯಕ್ತಿತ್ವದ ಹಿರಿಯ ಜೀವಿಯೊಂದಿಗೆ ಇಂದು ಆಚರಿಸಿದ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾದದ್ದು ಹಾಗೂ ಅರ್ಥಪೂರ್ಣವಾದದ್ದು.

1919 ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಹಾಗೂ 2025 ರಲ್ಲಿ ನಡೆದ ಪಹಲ್ಗಾಮ್ ಹತ್ಯಾಕಾಂಡದ ಬಗ್ಗೆ ತಿಳಿಸಿ, “ಆಪರೇಷನ್ ಸಿಂಧೂರ” ದ ಯಶಸ್ಸಿಗೆ ಕಾರಣರಾದ ನಮ್ಮ ದೇಶದ ರಕ್ಷಣಾ ವ್ಯವಸ್ಥೆಯ ಸಾಧನೆಯನ್ನು ಕೊಂಡಾಡಿದರು.

ಪ್ರಾಂಶುಪಾಲರಾದ ರೆಮ್ಯ ಬಿ.ವಿ ಮಾತನಾಡಿ, ಆಗಸ್ಟ್‌ 15 ಪ್ರತಿಯೊಬ್ಬ ಭಾರತೀಯನ ಪಾಲಿಗೆ ಅತ್ಯಂತ ಪವಿತ್ರ ದಿನ. ಆಗಸ್ಟ್ 15 ಎಂದಾಕ್ಷಣ ಪ್ರತಿಯೊಬ್ಬ ಭಾರತೀಯನ ಹೃನ್ಮನಗಳು ಪುಳಕಗೊಳ್ಳುತ್ತವೆ, ರೋಮಾಂಚನಗೊಳ್ಳುತ್ತವೆ. ರಾಷ್ಟ್ರಭಕ್ತಿ ಮೇಳೈಸುತ್ತದೆ. ನರನಾಡಿಗಳಲ್ಲಿ ರಾಷ್ಟ್ರಭ್ರಾತೃತ್ವ ಹರಿದಾಡುತ್ತದೆ. ಭಾರತಾಂಬೆಯ ಪುತ್ರರೆಲ್ಲರೂ ಜಾತಿ ಮತ ಭಾಷೆ ಧರ್ಮ ಪ್ರಾಂತ್ಯ ಎಂಬ ಯಾವುದೇ ಬೇಧ ಭಾವವಿಲ್ಲದೆ ಅತ್ಯಂತ ಸಂಭ್ರಮ ಸಡಗರದಿಂದ ವಿಜೃಂಭಣೆಯಿಂದ ಆಚರಣೆ ಮಾಡುವ ನಮ್ಮೆಲ್ಲರ ಹೆಮ್ಮೆಯ ಗೌರವ ಹಬ್ಬ- ಅದುವೇ ಭಾರತಾಂಬೆಯ ಜನುಮದಿನ. ಭಾರತೀಯರ ಶೌರ್ಯ ಮೆರೆದ ದಿನ.

ಗಂಡೆದೆಯ ವೀರರು ಗುಂಡಿಗೆ ಪ್ರಾಣ ಕೊಟ್ಟು ಭಾರತಾಂಬೆಯನ್ನು, ಭಾರತಮಾತೆಯ ಪುತ್ರರನ್ನು ಬ್ರಿಟೀಷರ ಸಂಕೋಲೆಗಳಿಂದ ಬಿಡಿಸಿದ ಮಹಾದಿನ. ಅದುವೇ ಭಾರತೀಯರ ಸ್ವತಂತ್ರ ದಿನ.

ನಾವು ಗೌರವದಿಂದ ಆಚರಿಸುವ ಈ ಹಬ್ಬ ಎಲ್ಲಿಯೂ ನಮಗೆ ಉಚಿತವಾಗಿ ದೊರಕಿದ್ದಲ್ಲ. ಯಾರ ದಯೆ ದಾಕ್ಷಿಣ್ಯದಿಂದಲೂ ಬಂದದ್ದಲ್ಲ. ತಕ್ಕಡಿ ಹಿಡಿದು ವ್ಯಾಪರಕ್ಕೆ ಬಂದ ಆಂಗ್ಲರು ತಮ್ಮ ಸ್ವಾರ್ಥಕ್ಕಾಗಿ ಭಾರತಾಂಬೆಯ ಪುತ್ರರನ್ನು ತಮ್ಮ ಆಳುಗಳಾಗಿ ದಾಸರನ್ನಾಗಿ ಮಾಡಿಕೊಂಡು, ಗುಲಾಮರನ್ನಾಗಿ ಮಾಡಿಕೊಂಡರು. ಅಷ್ಟೇ ಅಲ್ಲದೆ ಜನರ ಸ್ವಾತಂತ್ರ್ಯವನ್ನು ಕಸಿದುಕೊಂಡರು.

ಆಂಗ್ಲರ ಕಪಿಮುಷ್ಠಿಯಿಂದ ಬಿಡಿಸಿಕೊಳ್ಳಲು ಸಾವಿರಾರು ಭಾರತಾಂಬೆಯ ವೀರಪುತ್ರರು ತಮ್ಮ ತನು ಮನ ಧನಗಳನ್ನು ಅರ್ಪಿಸಿದ್ದಾರೆ. ಅವರ ತ್ಯಾಗ ಬಲಿದಾನ ಹಾಗೂ ನಿಸ್ವಾರ್ಥ ಸೇವೆಯಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ.

ನಾವು ಆಚರಿಸುವ ಈ ಹಬ್ಬದ ಹಿಂದೆ ಸಾವಿರ ಸಾವಿರ ಸಂಖ್ಯೆಯ ವೀರರ ತ್ಯಾಗ ಬಲಿದಾನವಿದೆ. ಅವರ ಸಾವಿದೆ ನೋವಿದೆ. ಅವರ ಶೌರ್ಯ ಸಾಹಸ ಅಡಗಿದೆ. ಹಾಗಾಗಿ ಇಂತಹ ಹಬ್ಬವನ್ನು ನಾವೆಲ್ಲರೂ ಸೇರಿ ಸಂಭ್ರಮದಿಂದ ಆಚರಿಸುವುದರ ಜೊತೆಗೆ ಅತ್ಯಂತ ಗೌರವದಿಂದ ಹಾಗೂ ಶ್ರದ್ಧೆಯಿಂದ ಆಚರಿಸಬೇಕಿದೆ. ಆಗ ಮಾತ್ರ ನಾವು ನಿಜವಾಗಿಯೂ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಸಾರ್ಥಕವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ಮಹಾನ್ ನಾಯಕರ ವೇಷಭೂಷಣಗಳು, ಪಥಸಂಚಲನ, ದೇಶಭಕ್ತಿ ಗೀತೆ, ನೃತ್ಯ, ಹಾಗೂ ಪಿರಾಮಿಡ್ ಶೋ ಗಳು ನೋಡುಗರ ಮನಸೂರೆಗೊಂಡವು.

ಇತ್ತೀಚೆಗಷ್ಟೇ ಘಟಿಸಿದ ಆಪರೇಷನ್ ಸಿಂಧೂರ್ ನ ನೃತ್ಯರೂಪಕ ಕಾರ್ಯಕ್ರಮ ಕೇಂದ್ರಬಿಂದುವಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್., ಟ್ರಸ್ಟಿ ನಯನಾ ಸ್ವರೂಪ್, ಶಿಕ್ಷಕವೃಂದ, ಮಕ್ಕಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!