ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ (Nalanda High School) ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ (Little Angels Anantha Schools) ಈ ದಿನ ಆಪರೇಷನ್ ಸಿಂಧೂರದ (Operation Sindhoora) ಪರಿಕಲ್ಪನೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು (Independence Day) ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳೇ ತಯಾರಿಸಿದ ಭಾರತ- ರಷ್ಯಾ ನಿರ್ಮಿತ ಬ್ರಹ್ಮೋಸ್ ಪ್ರತಿ ಕೃತಿಯನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು, ಗಾಂಧೀಜಿ ನೇತಾಜಿ ಪಟೇಲ್ ಭಗತ್ ಸಿಂಗ್ ಮುಂತಾದ ಅನೇಕ ಮಹನೀಯರು ಹೋರಾಡಿ ಗಳಿಸಿ ಕೊಟ್ಟಿರುವ ಸ್ವಾತಂತ್ರ್ಯವನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಹಾಗೂ ಭಯೋತ್ಪಾದಕತೆಯನ್ನು ನಿರ್ಮೂಲಗೊಳಿಸಬೇಕು.

ಬ್ರಹ್ಮೋಸ್ ಭಾರತ ದೇಶದ ಮಿಲಿಟರಿ ಶಕ್ತಿಯ ಪ್ರತೀಕವಾಗಿದೆ.

ಈ ವರ್ಷದ ಸ್ವಾತಂತ್ರೋತ್ಸವದ ಥೀಮ್ ನವ ಭಾರತ ವಾಗಿದ್ದು ಬಲಿಷ್ಠ ಭಾರತವನ್ನು ಕಟ್ಟಲು ಎಲ್ಲರೂ ಶ್ರಮ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ನೂರಾರು ಪುಟಾಣಿ ಮಕ್ಕಳು ರಾಷ್ಟ್ರ ನಾಯಕರ ವೇಶಭೂಷಣವನ್ನು ಧರಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಆಪರೇಷನ್ ಸಿಂಧೂರದ ಪರಿಕಲ್ಪನೆಯಲ್ಲಿ ನೃತ್ಯ ರೂಪಕವನ್ನು ಪ್ರಸ್ತುತ ಪಡಿಸಿ ನೆರೆದವರಲ್ಲಿ ದೇಶಭಕ್ತಿಯನ್ನು ಉದ್ದೀಪನ ಗೊಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಅನಿತಾ ಕೆ ಪಿ ಸುನಿತಾ ಪಿ ಶಿಕ್ಷಕ ವರ್ಗದವರು ವಿದ್ಯಾರ್ಥಿ ಸಮೂಹ ಹಾಗೂ ಪೋಷಕರು ಹಾಜರಿದ್ದರು.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಪರೇಷನ್ ಸಿಂಧೂರದ ಪರಿಕಲ್ಪನೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಿರೂಪಿಸಿದ, ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ ಮಕ್ಕಳು ಹಾಗೂ ಶಿಕ್ಷಕರನ್ನು ಉಪವಿಭಾಗಾಧಿಕಾರಿ ಎನ್. ದುರ್ಗಾಶ್ರೀ, ಶಾಸಕ ಧೀರಜ್ ಮುನಿರಾಜು, ತಹಶಿಲ್ದಾರ್ ವಿಭಾವಿದ್ಯಾ ರಥೋಡ್, ಇನ್ಸ್ಪೆಕ್ಟರ್ ಅಮರೇಶ್ ಗೌಡ, ನಗರಸಭೆಯ ಚುನಾಯಿತ ಜನಪ್ರತಿನಿದಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದರು.
