ಬೆಂ.ಗ್ರಾ.ಜಿಲ್ಲೆ: “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Krantiveer Sangolli Rayanna)” ಜಯಂತಿ ಅಂಗವಾಗಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
“ಸಂಗೊಳ್ಳಿ ರಾಯಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.