ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.
ಶುಕ್ರವಾರ ರಾತ್ರಿ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗೆ ಅಳವಡಿಸಿದ್ದ ಕಬ್ಬಿಣದ ಶೀಟುಗಳನ್ನು ಕುಯ್ದಿರುವ ದುಷ್ಕರ್ಮಿಗಳು ಅಂಗಡಿಗಳಿಗೆ ನುಗ್ಗಿ ಹಣ ದೋಚಲು ಯತ್ನಿಸಿದ್ದಾರೆ.
ಆದರೆ ಅಂಗಡಿಯಲ್ಲಿ ಹಣ ಸಿಗದೆ ಇದ್ದ ಕಾರಣ ಎರಡು ಅಂಗಡಿಗಳಲ್ಲಿ ತಲಾ 50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ಹಾಳುಗೆಡವಿದ್ದಾರೆ ಎಂದು ವರ್ತರಕರು ದೂರಿದ್ದಾರೆ.
ಈ ವ್ಯಾಪ್ತಿಯಲ್ಲಿನ ಅಂಗಡಿಗಳಲ್ಲಿ ಸತತ ಐದನೇ ಬಾರಿಗೆ ಕಳ್ಳತನ ನಡೆಯುತ್ತಿರುವುದು ವ್ಯಾಪಾರಸ್ಥರ ಆತಂಕ, ಆಕ್ರೋಶಕ್ಕೆ ಕಾರಣವಾಗಿದ್ದು, ಕಳ್ಳರ ಪತ್ತೆ ಹಚ್ಚಿ, ಕಾನೂನು ಕ್ರಮಕೈಗೊಂಡು ನಿರ್ಭೀತಿಯಿಂದ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ಕಲ್ಪಿಸುವಂತೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.