Interim report on Dharmasthala issue opens up confusion: B.Y. Vijayendra

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿ.ಸಿ.ಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಆರೋಪ ಮಾಡಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಬಹಳ ದೊಡ್ಡ ಷಡ್ಯಂತ್ರ ಇದೆ ಎಂದು ಡಿ.ಕೆ.ಶಿವಕುಮಾರ್ ಅವರೇ ಹೇಳಿಕೆ ಕೊಟ್ಟಿದ್ದಾರೆ.

ಸಂದರ್ಭ ಬಂದಾಗ ಉತ್ತರ ನೀಡುತ್ತೇನೆ ಎಂದಿದ್ದಾರೆ. ಇನ್ನೂ ಯಾವಾಗ ಸಮಯ ಬರಲಿದೆ? ರಾಜ್ಯದ ಜನರು- ಕೋಟಿ, ಕೋಟಿ ಭಕ್ತಾದಿಗಳು ಇವತ್ತು ಆತಂಕದಲ್ಲಿದ್ದಾರೆ. ಧರ್ಮಸ್ಥಳದಲ್ಲಿ ಯಾವ ರೀತಿ ತನಿಖೆ ನಡೆಯುತ್ತಿದೆ. ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ.

ಇದೆಲ್ಲ ವಿಷಯದಲ್ಲಿ ಜನರು ನಿದ್ದೆ ಮಾಡದಂಥ ಸ್ಥಿತಿ ಇದೆ ಎಂದು ವಿವರಿಸಿದರು. ಇನ್ನೂ ಕೂಡ ಡಿ.ಕೆ.ಶಿವಕುಮಾರ್ ಅವರಿಗೆ ಸಮಯ ಬಂದಿಲ್ಲ ಎಂದು ಕಾಣುತ್ತದೆ ಎಂದು ಹೇಳಿದರು.

ನಿನ್ನೆ ದಿನ ನಮ್ಮ ಪಕ್ಷದ ಸಂಸದರು, ಎಲ್ಲ ಹಿರಿಯ ಶಾಸಕರು, ವಿಧಾನಪರಿಷತ್ ಸದಸ್ಯರ ಜೊತೆಗೂಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಶ್ರೀ ಮಂಜುನಾಥೇಶ್ವರನ ದರ್ಶನ ಪಡೆದುಕೊಂಡಿದ್ದೇವೆ. ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿ ಮಾಡಿದ್ದೇವೆ ಎಂದು ವಿವರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ನಡೆಯುತ್ತಿದ್ದು, ಆ ಅಪಪ್ರಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಯಾಕೆ ಎಚ್ಚತ್ತುಕೊಂಡಿಲ್ಲ? ರಾಜ್ಯ ಸರಕಾರಕ್ಕೆ ಅಪಪ್ರಚಾರಕ್ಕೆ ಕಡಿವಾಣ ಹಾಕುವ ಇಚ್ಛೆ ಇರಲಿಲ್ಲವೇ? ಯಾವ ಕಾರಣಕ್ಕೆ ಇದು ಆಗಿಲ್ಲ ಎಂಬ ಕುರಿತು ಗೃಹ ಸಚಿವರು ಇವತ್ತು ತಮ್ಮ ಉತ್ತರದಲ್ಲಿ ತಿಳಿಸಬೇಕು ಎಂದು ಒತ್ತಾಯಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಸದನದಲ್ಲಿ ಏನು ಉತ್ತರ ನೀಡುತ್ತಾರೆಂದು ನೋಡಲಿದ್ದೇವೆ ಎಂದು ನುಡಿದರು.

ರಾಜ್ಯ ಸರಕಾರವು ತುಮಕೂರಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಪದೇಪದೇ ಎಫ್‍ಐಆರ್ ದಾಖಲಿಸುತ್ತದೆ. ಮೈಸೂರಿನಲ್ಲೂ ಪೋಸ್ಟ್ ವಿರುದ್ಧ ಕಾರ್ಯಕರ್ತನ ಮೇಲೆ ಎಫ್‍ಐಆರ್ ದಾಖಲಿಸಿ ಬಂಧಿಸಿದೆ. ರಾಜ್ಯ ಸರಕಾರವು ಹಿಂದೂ ಕಾರ್ಯಕರ್ತರ ಬಗ್ಗೆ ತೋರುವ ಆಸಕ್ತಿಯನ್ನು ಧರ್ಮಸ್ಥಳದ ವಿಷಯದಲ್ಲಿ ಅಪಪ್ರಚಾರದ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತೋರಿಲ್ಲ ಎಂದು ಟೀಕಿಸಿದರು.

ಹಣಕಾಸಿನ ಪರಿಸ್ಥಿತಿ- ದುಸ್ಥಿತಿ
ನುಡಿದಂತೆ ನಡೆಯುವ ರಾಜ್ಯ ಸರಕಾರದಡಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಸ್ವಾತಂತ್ರ್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರಕಾರಕ್ಕೆ ಇಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಮಾಸಾಶನ 4.85 ಕೋಟಿ ಮೊತ್ತವನ್ನು ಕೊಡದೇ ತಡೆ ಹಿಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳ ಚೆನ್ನಾಗಿದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣವನ್ನು ಬಿಡುಗಡೆ ಮಾಡದಂಥ ದುಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು.

ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ ಅಲ್ಲಿನ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಕಳೆದ ಆಗಸ್ಟ್‍ನಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ರೈತರೂ ಆತಂಕದಲ್ಲಿ ಇದ್ದರು. ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಖಾಯಂ ಪರಿಹಾರ ನೀಡಿಲ್ಲ. ಇವರು ತಡ ಮಾಡಿದ್ದು, ಒತ್ತಡ ಇತರ ಗೇಟ್‍ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದು ಗಮನ ಸೆಳೆದರು.

ಮತ್ತೊಂದು ಕಡೆ ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ಸಚಿವರ ಮತ್ತು ರಾಜ್ಯ ಸರಕಾರದ ಬೇಜವಾಬ್ದಾರಿತನದಿಂದ ರಾಜ್ಯ ಸರಕಾರ ಅಥವಾ ಸಂಬಂಧಿತ ಸಚಿವರು, ಟಿ.ಬಿ. ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!