ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ (Rain)
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಈ ಜಿಲ್ಲೆ ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯ ಪರಿಣಾಮ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಸಕಲೇಶಪುರ ಭಾಗದಲ್ಲಿ ಹೆದ್ದಾರಿ ಮೇಲೆ ಅಲ್ಲಲ್ಲಿ ಗುಡ್ಡ ಕುಸಿದ ಕಾರಣ ಶಿರಾಡಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ರಸ್ತೆ ಬಂದ್ ಆದ ಕಾರಣ ಭಾನುವಾರ ರಾತ್ರಿ ಹೆದ್ದಾರಿಯಲ್ಲಿ ಸಿಲುಕಿದ ನೂರಾರು ಸವಾರರು ಸಂಕಷ್ಟ ಎದುರಿಸಿದರು.
ಬೆಂಗಳೂರು, ಗ್ರಾಮಾಂತರ ಜಿಲ್ಲೆಗಳಲ್ಲೂ ಸೋಮವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಬಿರು ಗಾಳಿ ಬೀಸುವ ಸಾಧ್ಯತೆ ಸಾಧ್ಯತೆ ಇದು ಮೀನುಗಾರಿಕೆಗೆ ತೆರಳದಂತೆ ಬೆಸ್ತರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ರೆಡ್ ಅಲರ್ಟ್
ರಾಜ್ಯದಲ್ಲಿ ಮಳೆಯು ಮತ್ತಷ್ಟು ತೀವ್ರ ಗೊಂಡಿದ್ದು, ಭಾರತೀಯ ಹವಾ ಮಾನ ಇಲಾಖೆಯು (ಐಎಂಡಿ) ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.