ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಕಾಂಗ್ರೆಸ್ ಗ್ಯಾರಂಟಿ ” ಶಕ್ತಿ” ಯೋಜನೆ

Congress Guarantee Shakti scheme written in Golden Book of World Record

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ (Shakti scheme) ಮಹಿಳೆಯರು 500 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ, ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ಗೆ (Golden Book of World Records) ದಾಖಲಾಗಿದೆ.

ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ Golden Book of World Recordsನಲ್ಲಿ ದಾಖಲು- ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ( ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಬಲವಾಗಿ ನಂಬಿದ್ದವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು,
ಉಪ ಮುಖ್ಯಮಂತ್ರಿ‌ ಹಾಗೂ ಕೆ.ಪಿ.ಸಿ.ಸಿ‌ ಅಧ್ಯಕ್ಷರಾದ ಡಿ ಕೆ‌ ಶಿವಕುಮಾರ್ ರವರು.

ಈ‌‌ ಚಾರಿತ್ರಿಕ ಸಾಧನೆಯು ಕೆ ಎಸ್ ಆರ್ ಟಿ‌ ಸಿ, ಬಿ ಎಂ ಟಿ‌‌ ಸಿ, ವಾ‌ಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ‌ ಆಡಳಿತ ಮಂಡಳಿ, ಸಾರಿಗೆ ಸಂಸ್ಥೆಗಳ ಮಾನ್ಯ ಅಧ್ಯಕ್ಷರುಗಳು, ಮಾನ್ಯ ಉಪಾಧ್ಯಕ್ಷರುಗಳು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರುಗಳು
ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ.

ಸಮಸ್ತ ಸಿಬ್ಬಂದಿಗಳ ಪರಿಶ್ರಮ, ಕಾರ್ಯತತ್ಪರತೆ ಮತ್ತು ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ ಮುಖಂಡರುಗಳ ಸಹಕಾರವನ್ನು‌ ಮರೆಯುವಂತಿಲ್ಲ ಅವರಿಗೆ ನನ್ನ ಧನ್ಯವಾದಗಳು.

ಶಕ್ತಿ ಯೋಜನೆಯ ಪ್ರಾರಂಭದಿಂದಲೂ ಬೆಂಬಲ,‌ಪ್ರೋತ್ಸಾಹ‌ ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಸಲಹೆ ನೀಡುತ್ತಾ ಬಂದಿರುವ ಮಾಧ್ಯಮದವರಿಗೆ ಧನ್ಯವಾದಗಳು.

ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ‌ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರೆಂಟಿ ಯೋಜನೆಯಾದ ಶಕ್ತಿ‌ ಯೋಜನೆಯು‌ ಅತ್ಯಂತ ಸವಾಲಿನಿಂದ‌ ಕೂಡಿದ್ದಾಗಿತ್ತು. ಕಳೆದ ಐದಾರು ವರುಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ, ಹೊಸ‌ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ‌ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ.

ಈ ಎರಡು ವರುಷಗಳ‌ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌ 5800 ಹೊಸ ಬಸ್ಸುಗಳ ಸೇರ್ಪಡೆ,10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ.

Beyond Free Rides- ಎಂಬ ಹೆಸರಿನಲ್ಲಿ Sustainable Mobility Network ರವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ – ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ.

ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು

ಇನ್ನೂ ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.

ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ.

ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು.

ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ.

ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು ಎಂದಿದ್ದಾರೆ.

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]