1 lakh crores in the pockets of the poor from Congress schemes: DCM D.K. Shivakumar

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

“ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ನೀವು ಇದರ ಬಗ್ಗೆ ಜನರಿಗೆ ನೆನಪಿಸುತ್ತಿರಬೇಕು. ನಾವು ಈ ಯೋಜನೆ ಜಾರಿ ಮಾಡಿ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ರೈತರ ಉಚಿತ ವಿದ್ಯುತ್ ಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆಗಳಿಗೆ ಸೇರಿ 1 ಲಕ್ಷ ಕೋಟಿಯಷ್ಟು ಹಣವನ್ನು ನಮ್ಮ ಸರ್ಕಾರ ಬಡವರ ಜೇಬಿಗೆ ಹಾಕುತ್ತಿದೆ. ಈ 1 ಲಕ್ಷ ಕೋಟಿ ಹಣದಲ್ಲಿ ಬಿಜೆಪಿ ಅಥವಾ ದಳದವರ ಒಂದು ಕಾರ್ಯಕ್ರಮ ಇದೆಯೇ? ನಾನು ಶಾಸಕನಾಗಿದ್ದಾಗ ಜೆ.ಹೆಚ್ ಪಟೇಲರ ಕಾಲದಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಕಾಲದಲ್ಲಿ ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆವು. 27 ಇಲಾಖೆಯನ್ನು ಪಂಚಾಯ್ತಿಗೆ ಸೇರಿಸಿದೆವು. ಪಂಚಾಯ್ತಿಗೆ ಈ ರೀತಿ ಶಕ್ತಿ ತುಂಬಿದ್ದು ಕಾಂಗ್ರೆಸ್ ಪಕ್ಷ” ಎಂದು ತಿಳಿಸಿದರು.

“ಜೆಡಿಎಸ್ ವಿಚಾರಕ್ಕೆ ಬಂದರೆ, ದೊಡ್ಡ ಗೌಡರು, ಅವರ ಮಕ್ಕಳು, ಮೊಮ್ಮಕ್ಕಳು ಯಾವ ತ್ಯಾಗ ಮಾಡಿದ್ದಾರೆ? ಇನ್ನು ಬಿಜೆಪಿ ವಿಚಾರಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಏನು? ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಹೊಟ್ಟೆ ತುಂಬಿಸಿದ್ದಾರಾ? ಜಮೀನು ಕೊಟ್ಟಿದ್ದಾರಾ? ರೈತರಿಗೆ ಮೊದಲು ಉಚಿತ ವಿದ್ಯುತ್ ಕೊಟ್ಟಿದ್ದು ಬಂಗಾರಪ್ಪ, ನಾನು ಸಚಿವನಾದ ಸಚಿವನಾದಾಗ 6 ತಾಸು ಇದ್ದ ವಿದ್ಯುತ್ ಅನ್ನು 7 ತಾಸಿಗೆ ಏರಿಸಿದೆ. ಮೊದಲು ಪ್ರತಿ ವರ್ಷ ಇದಕ್ಕಾಗಿ 800 ಕೋಟಿ ನೀಡುತ್ತಿದ್ದೆವು. ಈಗ 20 ಸಾವಿರ ಕೋಟಿ ನೀಡುತ್ತಿದ್ದೇವೆ” ಎಂದು ತಿಳಿಸಿದರು.

“ಇಂದು ಯುವಕರಿಗೆ ಬಹಳ ಸ್ಫೂರ್ತಿಯಾದಂತಹ ದಿನ. ಇತ್ತೀಚೆಗೆ ನಮ್ಮ ಯುವ ಮುಖಂಡ ಬಿ.ವಿ ಶ್ರೀನಿವಾಸ್ ಅವರು ರನ್ ಫಾರ್ ರಾಜೀವ್ ಎಂಬ ಮ್ಯಾರಥಾನ್ ಆಯೋಜಿಸಿದ್ದರು. ಸುಮಾರು 15 ಸಾವಿರ ಜನ ಬೆಳಗ್ಗೆ 5.30ಕ್ಕೆ ಬಂದು ಸೇರಿದ್ದರು. ಇಲ್ಲಿ ಅನೇಕ ಜನಸಾಮಾನ್ಯರು ಭಾಗವಹಿಸಿದ್ದರು. ರಾಜೀವ್ ಗಾಂಧಿ ಅವರ ಕೊಡುಗೆಯನ್ನು ನಮ್ಮ ಜನ ಇಂದಿಗೂ ಸ್ಮರಿಸುತ್ತಿದ್ದಾರೆ” ಎಂದರು.

“ನಾನು ವಿದ್ಯಾರ್ಥಿಯಾಗಿದ್ದಾಗ ನಾನು ಜೆನರಲ್ ಹಾಸ್ಟೆಲ್ ನಲ್ಲಿದ್ದೆ. ನಮ್ಮ ಊರಿನಲ್ಲಿ ಆಗ ದೂರವಾಣಿ ಸಂಪರ್ಕ ಇರಲಿಲ್ಲ. ಅದನ್ನು ಪಡೆಯಬೇಕಾದರೆ ಮೂರರಿಂದ ನಾಲ್ಕು ವರ್ಷ ಬೇಕಾಗುತ್ತದೆ. ಆದರೆ ಇಂದು ಪ್ರತಿಯೊಬ್ಬರು ಎರಡು ಮೂರು ಫೋನ್ ಇಟ್ಟುಕೊಂಡಿದ್ದಾರೆ. ಈ ದೇಶಕ್ಕೆ ಕಂಪ್ಯೂಟರ್ ಹಾಗೂ ದೂರವಾಣಿ ತಂತ್ರಜ್ಞಾನದ ಕ್ರಾಂತಿ ತಂದವರು ರಾಜೀವ್ ಗಾಂಧಿ” ಎಂದು ತಿಳಿಸಿದರು.

“ಯುವಕರ ಮೇಲೆ ರಾಜೀವ್ ಗಾಂಧಿ ಅವರಿಗೆ ವಿಶೇಷ ಕಾಳಜಿ. ಸಂವಿಧಾನಕ್ಕೆ 74ನೇ ತಿದ್ದುಪಡಿ ತಂದು ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರುವಂತೆ ನೋಡಿಕೊಂಡರು. ನಿನ್ನೆ ಸದನದಲ್ಲಿ ಬಿಜೆಪಿ ನಾಯಕರು 74ನೇ ತಿದ್ದುಪಡಿಗೆ ಧಕ್ಕೆಯಾಗುತ್ತದೆ ಎಂದು ಕುಣಿಯುತ್ತಿದ್ದರು. ನಾನು ಈ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಿ ಐದು ಪಾಲಿಕೆ ರಚಿಸುತ್ತಿದ್ದೇವೆ. ನಾನು ಕೂಡ ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ ಇಲ್ಲಿಯವರೆಗು ಬಂದಿದ್ದೇನೆ. ಸೆ.2ರವೆಳೆಗೆ ಹೊಸ ಪಾಲಿಕೆ ನಾಮಫಲಕ ಅಳವಡಿಸಲಾಗುವುದು. ನಂತರ ಕ್ಷೇತ್ರ ಮರುವಿಂಗಡಣೆ ಮಾಡಿ, ಮತದಾರರ ಪಟ್ಟಿ ಸಿದ್ಧಗೊಳಿಸಲು ಅವಕಾಶ ನೀಡಲಾಗಿದೆ. ಈ ಪ್ರಕ್ರಿಯೆ ಮುಗಿದ ನಂತರ ಪಾಲಿಕೆ ಚುನಾವಣೆ ನಡೆಸಲಾಗುವುದು. 21 ವಯೋಮಾನದವರಿಗಿದ್ದ ಮತದಾನದ ಹಕ್ಕನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಅಂತಹ ಧೀಮಂತ ನಾಯಕರನ್ನು ನಾವು ಸ್ಮರಿಸುತ್ತಿದ್ದೇವೆ” ಎಂದರು.

ಎಲ್ಲಾ ಸಮುದಾಯದ ಯುವಕರಿಗೆ ಆದ್ಯತೆ ನೀಡುವಂತೆ ಬಂಗಾರಪ್ಪ ಅವರಿಗೆ ಸೂಚಿಸಿದ್ದರು

“ಚನ್ನಪಟ್ಟಣದಲ್ಲಿ ಕೋಮುಗಲಭೆಯಾದ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿದ್ದರು. ನಾನು ಆಗ ಚನ್ನಪಟ್ಟಣದ ಒಂದು ಭಾಗದಲ್ಲಿ ಶಾಸಕನಾಗಿದ್ದೆ. ರಾಜೀವ್ ಗಾಂಧಿ ಅವರು ನನ್ನನ್ನು ಅವರ ಕಾರಿನಲ್ಲಿ ಕೂರಿಸಿಕೊಂಡು ಅನೇಕ ವಿಚಾರಗಳ ಬಗ್ಗೆ ವಿಚಾರಿಸಿದರು. ಕುಮಾರಕೃಪ ಅತಿಥಿ ಗೃಹಕ್ಕೆ ಬರುವಾಗ ನಾನು ಸೇರಿದಂತೆ ಇತರೆ ನಾಯಕರು ಬಂಗಾರಪ್ಪನವರಿಗೆ ಆಪ್ತ ನಾಯಕರು ಇದ್ದೆವು. ಆ ಸಂದರ್ಭದಲ್ಲಿ ವಿರೇಂದ್ರ ಪಾಟೀಲ್ ಅವರ ಅರೋಗ್ಯ ಹದಗೆಡುತ್ತಿತ್ತು. ರಾಜೀವ್ ಗಾಂಧಿ ಅವರಿಗೆ ಅವರ ನಾಯಕತ್ವ ಬದಲಿಸುವ ಬಯಕೆ ಇರಲಿಲ್ಲ, ಆದರೆ ಆರೋಗ್ಯ ಹದಗೆಟ್ಟ ಕಾರಣ ನಾಯಕತ್ವ ಬದಲಾವಣೆ ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಗಾರಪ್ಪ ಅವರನ್ನು ಮಾಡಬೇಕು ಎಂದು ತೀರ್ಮಾನಿಸಿದರು. ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರು ಬಂಗಾರಪ್ಪನವರಿಗೆ ನೀವು ಎಲ್ಲಾ ಸಮುದಾಯದ ಯುವಕರಿಗೆ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದರು. ನಮ್ಮ ಜಿಲ್ಲೆಯಲ್ಲಿ ಚಿಕ್ಕೇಗೌಡರು ದೊಡ್ಡ ನಾಯಕರಾಗಿದ್ದರೂ ನಾನು ಸಚಿವನಾದೆ” ಎಂದು ತಿಳಿಸಿದರು.

“ಈಗ ಬೇರೆ ಬೇರೆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವ ಅನೇಕ ನಾಯಕರು ರಾಜೀವ್ ಗಾಂಧಿ ಅವರ ಕಾಲದಲ್ಲಿ ಬೆಳೆದು ಬಂದವರು. ಈ ದೇಶದ ಸಮಗ್ರತೆ, ಐಕ್ಯತೆ ಶಾಂತಿಗಾಗಿ ನಮ್ಮ ಪಕ್ಷದ ನಾಯಕರು ಮಾಡಿರುವ ತ್ಯಾಗ ಬಲಿದಾನ ಬೇರೆ ಪಕ್ಷದ ನಾಯಕರು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಚುನಾವಣೆ ನಡೆಸಲು ಪತ್ರ ಬರೆದಿದ್ದು, ಇದನ್ನು ಯಾವ ರೀತಿ ನಡೆಸಬೇಕು ಎಂದು ತೀರ್ಮಾನ ಮಾಡಲು ಸಮಿತಿ ರಚಿಸಲಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!