Suspension of 18 MLAs.. B.Y. Vijayendra told BJP's next move

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು.

ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಎ, ಬಿ, ಸಿ ಎಂದು ಮಾಡಿದ್ದಾರೆ ಎಂದು ಆರೋಪಿಸಿದರು.
ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು ಎಂದು ಕೇಳಿದರು.

ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ, ಪಂಗಡಗಳ ಕುರಿತು ಒಂದು ದಿಟ್ಟ ನಿರ್ಧಾರ ಮಾಡಿದ್ದರು. ಅವತ್ತು ಬೊಮ್ಮಾಯಿಯವರು ಪರಿಶಿಷ್ಟ ಜಾತಿಗೆ ಶೇ 15 ಇದ್ದುದನ್ನು ಶೇ 17ಕ್ಕೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಶೇ 3 ಇದ್ದುದನ್ನು ಶೇ 7ಕ್ಕೆ ಏರಿಕೆ ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಇದೇ ಸಿದ್ದರಾಮಯ್ಯನವರು, ಒಳ ಮೀಸಲಾತಿಯ ಬಿಜೆಪಿ ಸರಕಾರದ ನಿರ್ಧಾರವನ್ನು ಯಾವುದೂ ಅನುಷ್ಠಾನ ಆಗಿಲ್ಲ; ಇವರು ಬೂಟಾಟಿಕೆ- ನಾಟಕ ಮಾಡುತ್ತಿದ್ದಾರೆಂದು ರಾಜ್ಯಾದ್ಯಂತ ಓಡಾಡಿ ಅಪಪ್ರಚಾರ ಮಾಡಿದ್ದರು ಎಂದು ಟೀಕಿಸಿದರು.

ಮುಖ್ಯಮಂತ್ರಿ ಪಲಾಯನ ಮಾಡಿದ್ದೇಕೆ?
ಇವತ್ತು ಸಿದ್ದರಾಮಯ್ಯ ಅವರು ಯಾಕೆ ಓಡಿ ಹೋಗುವ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರು ಚರ್ಚೆ ಮಾಡಬೇಕೆಂದು ಕೋರಿದರೂ ಪಲಾಯನವಾದ ಮಾಡಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಈ ಮೂಲಕ ಸದನಕ್ಕೆ ಅಗೌರವ ತೋರಿದ್ದಾರೆ ಎಂದರು.
ಜಸ್ಟಿಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿತ್ತೇ ವಿನಾ ಆ ಆಯೋಗಕ್ಕೆ ಹಣಕಾಸಿನ ನೆರವನ್ನು ಕೊಟ್ಟು ವ್ಯವಸ್ಥೆ ಮಾಡಿದ್ದು, ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಬಿಜೆಪಿ ಸರಕಾರ. ಅದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಸವರಾಜ ಬೊಮ್ಮಾಯಿಯವರು ಮುಂದಾಗಿದ್ದರು ಎಂದು ಅವರು ಗಮನ ಸೆಳೆದರು.

ದತ್ತಾಂಶ ಇಟ್ಟುಕೊಂಡು ವರ್ಗೀಕರಣ ಮಾಡಬೇಕಿತ್ತು. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆ ವಿಚಾರವನ್ನು ಇಟ್ಟುಕೊಂಡು ಒಳ ಮೀಸಲಾತಿ ಕೊಡಬೇಕೇ ಹೊರತು ಜನಸಂಖ್ಯೆ ಆಧಾರದಲ್ಲಿ ಅಲ್ಲ ಎಂದು ಪ್ರತಿಪಾದಿಸಿದರು.

ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪ್ರಾಮಾಣಿಕ ಉತ್ತರ ಕೊಡಬೇಕು. ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಶೇ 17 ಮೀಸಲಾತಿ ಕೊಟ್ಟಾಗ ಅಪಪ್ರಚಾರ ಮಾಡಿದ್ದೀರಿ. ಈಗ ಅದೇ ಶೇ 17 ಅನ್ನು ಮುಂದಿಟ್ಟಿದ್ದೀರಲ್ಲವೇ? ಹಿಂದಿನ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಮಾಡಿದ್ದನ್ನು ಈಗಲಾದರೂ ಒಪ್ಪಿಕೊಳ್ಳಿ ಎಂದು ಆಗ್ರಹಿಸಿದರು. ಇದನ್ನು ನಾಳೆ ಸದನದಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳಿಂದ ಹೇಳಿಕೆ ಪಡೆಯುತ್ತೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಸತ್ಯಾಂಶವನ್ನು ಜನತೆಗೆ ತಿಳಿಸಲಿ, ಅಲ್ಲದೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು. ದತ್ತಾಂಶವಿಲ್ಲದೇ ಹೇಗೆ ಇದನ್ನು ಮಾಡಿದ್ದಾರೆ ಎಂಬ ಕುರಿತು ನಾಳೆ ಚರ್ಚೆ ಮಾಡುತ್ತೇವೆ ಎಂದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!