ಬೆಂ.ಗ್ರಾ.ಜಿಲ್ಲೆ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರು ಆಗಸ್ಟ್ 21 ರಂದು ದೊಡ್ಡಬಳ್ಳಾಪುರ ನಗರಸಭೆಗೆ (Municipal Council) ಭೇಟಿ ನೀಡಲಿದ್ದಾರೆ.
ಆಗಸ್ಟ್ 21 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದೊಡ್ಡಬಳ್ಳಾಪುರದ ನಗರಸಭೆಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ಆಗಸ್ಟ್ 22 ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕು ಪಂಚಾಯಿತಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ.
ನಂತರ ಮಧ್ಯಾಹ್ನ 3 ಗಂಟೆಗೆ ದೇವನಹಳ್ಳಿ ತಾಲ್ಲೂಕು ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.