ದೊಡ್ಡಬಳ್ಳಾಪುರ: ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥಕ್ಕೆ ಹೊಂದಿಕೊಂಡಿರುವ ನೆರೆ ರಾಜ್ಯ ಆಂಧ್ರಪ್ರದೇಶದ ಗ್ರಾಮದಿಂದ ಸ್ಕೂಟಿಯಲ್ಲಿ ಅಕ್ರಮವಾಗಿ ತುಂಬಿಕೊಂಡು ಬರುತ್ತಿದ್ದ ವೇಳೆ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ವರದನಹಳ್ಳಿ ನಿವಾಸಿ ಪವಿತ್ರ ಎಂದು ಪೊಲೀಸರು ತಿಳಿಸಿದ್ದಾರೆ.
ಈಕೆ ಮನೆಯಲ್ಲಿ ಅಕ್ರಮವಾಗಿ ಹೆಂಡ ಮಾರಾಟ ಮಾಡುತ್ತಿದ್ದ ಮಾಹಿತಿಯ ಮೆರೆಗೆ ಕಾರ್ಯಾಚರಣೆ ನಡೆಸಿರುವ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಪೊಲೀಸರು, ಸ್ಕೂಟಿಯ ಸೀಟ್ ಕೆಳಗೆ, ಬ್ಯಾಗ್ ಹಾಗೂ ಚೀಲದಲ್ಲಿ ಸಾಗಿಸುತ್ತಿದ್ದ ಸುಮಾರು 7 ಸಾವಿರ ರೂ. ಮೌಲ್ಯದ 70 ಲೀಟರ್ ಹೆಂಡವನ್ನು ವಶಕ್ಕೆ ಪಡೆದಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.