CM, DCM wearing masks Running situation: B.Y. Vijayendra

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ವಿಶ್ಲೇಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುಂಡಿಗಳಲ್ಲಿ ಏನೂ ಸಿಕ್ಕದೇ ಈಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಆತಂಕದಲ್ಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ದೂರುದಾರನಿಗೆ ಮುಖವಾಡ ಹಾಕುವ ನಿರ್ಧಾರ ಮಾಡಿದ್ದರು. ದೂರುದಾರನ ಮುಖವಾಡವೂ ಕಳಚಿಬಿದ್ದಿದೆ ಎಂದು ಹೇಳಿದರು.

ಧರ್ಮಸ್ಥಳದ ವಿಚಾರವಾಗಿ ಬಿಜೆಪಿ ನಮ್ಮ ಹೋರಾಟವನ್ನು ಈಗಾಗಲೇ ಘೋಷಿಸಿದೆ; ‘ಧರ್ಮ ರಕ್ಷಣೆಗಾಗಿ ಧರ್ಮ ಯುದ್ಧ’ ನಡೆಸಲಿದ್ದೇವೆ ಎಂದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದರೆ, ಪಾಪ ಸಿದ್ದರಾಮಯ್ಯನವರು ಯಾರೋ ಎಡಪಂಥೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಧರ್ಮಸ್ಥಳದಲ್ಲಿ ಎಸ್‍ಐಟಿ ತನಿಖೆಗೆ ಆದೇಶಿಸಿದರು. ನಾವೂ ಅದನ್ನು ಸ್ವಾಗತ ಮಾಡಿದ್ದೆವು. ಗುಂಡಿ ಬಗೆದಂತೆ ಏನೋ ಸಿಕ್ಕುವುದಾಗಿ ವಿಧಾನಸೌಧದಲ್ಲಿ ಕುಳಿತು ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದರು. 15- 16 ಗುಂಡಿ ತೋಡಿದರೂ ಧರ್ಮಸ್ಥಳದಲ್ಲಿ ಏನೂ ಸಿಕ್ಕಿಲ್ಲ ಎಂದು ವಿವರಿಸಿದರು.

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅವಿವೇಕತನದಿಂದ ನಡೆದುಕೊಳ್ಳುತ್ತಿದೆ. ಆ ದೂರುದಾರ, ಆತನ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆಯುತ್ತಿವೆ. ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಿದರೆ, 24 ಗಂಟೆಯಲ್ಲಿ ಅವರನ್ನು ಬಂಧಿಸುತ್ತಾರೆ ಎಂದು ಆಕ್ಷೇಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ 15-20 ದಿನಗಳಿಂದ ಸರಾಗವಾಗಿ ಅಪಪ್ರಚಾರ ನಡೆಯುತ್ತಿದೆ. ಆದರೂ, ಇವರ ವಿರುದ್ಧ ತನಿಖೆ ಮಾಡುತ್ತಿಲ್ಲ; ಇದರ ವಿರುದ್ಧ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ ಎಂದು ಸ್ಪಷ್ಟಪಡಿಸಿದರು.

11 ಸಾವಿನ ಹರಿಕಥೆ ಹೇಳಿದ ಸಿಎಂ
ಚಿನ್ನಸ್ವಾಮಿ ಕ್ರೀಡಾಂಗಣದ ಆರ್.ಸಿ.ಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯ ಕುರಿತ ಉತ್ತರ ಕೊಡುವಾಗ ಮುಖ್ಯಮಂತ್ರಿಗಳು ಸದನದಲ್ಲಿ ಬಹಳ ಭಾವುಕರಾಗಿ ಆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ, ಅವರು ಹರಿಕಥೆ ಹೇಳುವ ಕೆಲಸ ಮಾಡಿದರು ಎಂದು ವಿಜಯೇಂದ್ರ ಅವರು ಟೀಕಿಸಿದರು.

ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆದ ಇಂಥ ಸಾವಿನ ಅಂಕಿ ಅಂಶವನ್ನು ಅವರು ನೀಡಿದರು. ಬಿಜೆಪಿ ಸಾವಿನಲ್ಲಿ ರಾಜಕೀಯ ಮಾಡುತ್ತಿಲ್ಲ. ಕೋವಿಡ್ ವೇಳೆ ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 36 ಜನರು ಮೃತಪಟ್ಟಿದ್ದರು. ಆಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕಳೆದ ಚುನಾವಣೆ ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಮೃತ 36 ಜನರ ಕುಟುಂಬದವರಿಗೆ ಸರಕಾರಿ ನೌಕರಿ ಕೊಡುವುದಾಗಿ ತಿಳಿಸಿದ್ದರು. ಸರಕಾರ ಬಂದು ಎರಡೂವರೆ ವರ್ಷ ಆದರೂ ನಿಮ್ಮ ಯೋಗ್ಯತೆಗೆ ಸರಕಾರಿ ನೌಕರಿ ಕೊಡಲು ಸಾಧ್ಯವಾಯಿತೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಸಾವಿನಲ್ಲಿ ರಾಜಕೀಯ ಮಾಡುವವರು ಕಾಂಗ್ರೆಸ್ ಪಕ್ಷದವರು ಎಂದು ಆರೋಪಿಸಿದರು.

ಕಾಲ್ತುಳಿತ ಸಾವಿನ ವಿಷಯದಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಅಮಾಯಕ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಂಡಿರಲ್ಲವೇ ಎಂದು ಕೇಳಿದರು. ಪೊಲೀಸ್ ಇಲಾಖೆಗೇ ಅಪಮಾನ ಮಾಡುವ ಕೆಲಸ ಮಾಡಿದಿರಲ್ಲವೇ? ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡಬೇಕಿತ್ತು ಎಂದು ಆಗ್ರಹಿಸಿದರು.

ಆರ್.ಸಿ,ಬಿ, ಕೆಎಸಿಎ, ಡಿಎನ್‍ಎ, ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರು ಎಂಬ ತೀರ್ಪನ್ನು ಮುಖ್ಯಮಂತ್ರಿಗಳೇ ಕೊಟ್ಟಿದ್ದಾರೆ. ಈ ಸಂಪೂರ್ಣ ಧಾರವಾಹಿಯಲ್ಲಿ ಮುಖ್ಯಮಂತ್ರಿಗಳೇ ಅಪರಾಧಿ ನಂಬರ್ 1. ಉಪ ಮುಖ್ಯಮಂತ್ರಿಗಳು ಎಡರನೇ ಅಪರಾಧಿ. ಇವರ ಹುಳುಕನ್ನು ಮುಚ್ಚಿ ಹಾಕಿಕೊಳ್ಳಲು ಭಾಷಣ ಬಿಗಿಯುತ್ತಾರೆ ಎಂದು ಟೀಕಿಸಿದರು.

ವಿಧಾನಸೌಧದ ಬಳಿ ವಿಜಯೋತ್ಸವ ಮಾಡಲು ತೀರ್ಮಾನ ಮಾಡಿದಿರಲ್ಲವೇ? ಆರ್‍ಸಿಬಿಯಲ್ಲಿ ಕರ್ನಾಟಕದ ಎಷ್ಟು ಆಟಗಾರರು ಇದ್ದಾರೆ ಎಂಬುದು ಆಗ ನಿಮಗೆ ಗೊತ್ತಿರಲಿಲ್ಲವೇ? ತಮ್ಮ ಕುಟುಂಬದ ಸದಸ್ಯರನ್ನು ಕರೆದುಕೊಂಡು ಸೆಲ್ಫಿ ಹೊಡೆಸಿಕೊಂಡಿರಲ್ಲವೇ? ಆಗ ಈ ತಂಡದಲ್ಲಿ ಎಷ್ಟು ಕನ್ನಡಿಗರಿದ್ದಾರೆ ಎಂದು ಗೊತ್ತಿರಲಿಲ್ಲವೇ? ಇವತ್ತು ಮುಖ್ಯಮಂತ್ರಿಗಳಿಗೆ ನೆನಪಾಗುತ್ತಿದೆಯೇ ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು. ಕಾಲ್ತುಳಿತದ 11 ಸಾವು ಸರಕಾರಿ ಪ್ರಾಯೋಜಿತ ಕೊಲೆ ಎಂದು ಅವರು ತಿಳಿಸಿದರು.

ರಾಜಕೀಯ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ

[ccc_my_favorite_select_button post_id="112958"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!