ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಾಗಿದೆ.
ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ಜು ಸುಪ್ರೀಂ ಕೋರ್ಟ್ ರದ್ದು ಮಾಡಿದ ತೀರ್ಪಿನ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿತ್ತು.
ಆಗಸ್ಟ್ 14ರಂದು ಸುಪ್ರೀಂ ತೀರ್ಪು ಹೊರ ಬಿದ್ದಿದ್ದು ಇಂದಿಗೆ ದರ್ಶನ್ ಆ್ಯಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು.
ಇಂದು 12 ಗಂಟೆಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆ ನಟ ದರ್ಶನ್ ಹಾಗೂ ಸಂಗಡಿಗರು ಹಾಜರಾಗಿದ್ದರು ಎಂದು ವರದಿಯಾಗಿದೆ.