Sri Krishna Janmashtami celebrations at MSV Public School, Doddaballapur

ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ‌ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ನಗರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಸುಧಾರಾಣಿ ಲಕ್ಷ್ಮಿನಾರಾಯಣ ಅವರು ಭಾಗವಹಿಸಿದ್ದರು.

ಶಾಲಾ ಮಕ್ಕಳು ಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ನಾನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಪುಟಾಣಿ ಮಕ್ಕಳು ಪ್ರದರ್ಶಿಸಿದ ಶ್ರೀ ವಿಷ್ಣುವಿನ ದಶಾವತಾರ ಕಾರ್ಯಕ್ರಮ ಗಮನ ಸೆಳೆಯಿತು.

ಕೃಷ್ಣನ ಹಾಗೂ ಅವನ ತುಂಟಾಟದ ಕುರಿತಾದ ಹಾಡು, ನೃತ್ಯಗಳು ನೆರೆದಿದ್ದ ಪೋಷಕರ ಮನಸೂರೆಗೊಂಡವು.

ಕೃಷ್ಣ ಹಾಗೂ ರಾಧೆಯ ವೇಷಧಾರಿಗಳಿಂದ, ಕೃಷ್ಣನ ಮಂಟಪ, ಉಯ್ಯಾಲೆ, ಬಣ್ಣಬಣ್ಣದ ರಂಗೋಲಿ ಹಾಗೂ ಕೃಷ್ಣನ ಹೆಜ್ಜೆಗುರುತುಗಳಿಂದ ಶಾಲಾ ಆವರಣ ಬೃಂದಾವನದಂತೆ ಕಂಗೊಳಿಸುತ್ತಿತ್ತು.

ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಬೆಣ್ಣೆ ಕದ್ದ ಕೃಷ್ಣನ ರೀತಿ ಶಾಲೆಯ ಮುದ್ದು ಮಕ್ಕಳು ಎಲ್ಲರ ಮನ ಗೆದ್ದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಎಂಎಸ್‌ವಿ ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಎ ಸುಬ್ರಮಣ್ಯ ಮಾತನಾಡಿ, ಗೊಲ್ಲರ ಗೊಲ್ಲ, ಗೋಪಿಲೋಲ, ಮುರಾರಿ, ಮಧುಸೂದನ, ಕೇಶವ, ಅಚ್ಯುತ, ಆದಿನಾರಾಯಣ ಎಂದು ನಾಮಾಂಕಿತನಾದ ಜಗದೊಡೆಯನಾದ ಶ್ರೀಕೃಷ್ಣನ ಲೀಲೆಗಳು ಅಪಾರ ಎಂದು ಬಣ್ಣಿಸಿದರು.

ಶ್ರೀಕೃಷ್ಣನ ಲೀಲೆಗಳಿಗೆ ಎಣೆಯಿಲ್ಲ. ಆತನ ಶೌರ್ಯ, ಸಾಹಸಕ್ಕೆ ಆತನೇ ಸರಿಸಾಟಿ. ಬಾಲ್ಯದಿಂದಲೂ ತನ್ನ ಲೀಲೆಗಳ ಮೂಲಕ ಜಗತ್ತಿನ ಅಜ್ಞಾನಿಗಳ ಅಜ್ಞಾನವನ್ನು ತೊಳೆದು, ಜ್ಞಾನದ ಬೀಜವನ್ನು ಬಿತ್ತಿದ ಮಹಾನ್ ಚೇತನ. ನಮ್ಮ ಈ ಪೋರ ಕೃಷ್ಣ. ಭೂಲೋಕಕ್ಕೆ ಮಾರಕವಾಗಿದ್ದ ಅನೇಕ ಅಸುರರನ್ನು ಸಂಹರಿಸಿ, ಶಾಂತಿ ನೆಮ್ಮದಿಯನ್ನು ಒದಗಿಸಿಕೊಟ್ಟ ಮುರಾರಿಯ ಲೀಲೆ ಅಪಾರವಾದದ್ದು ಎಂದರು.

ಶ್ರೀಕೃಷ್ಣನ ಯಾರೂ ಶ್ರದ್ಧಾಭಕ್ತಿಯಿಂದ ಪೂಜೆಗೈಯುತ್ತಾರೋ, ಭಜಿಸುತ್ತಾರೋ ಅಂತಹವರ ಬಾಳಲ್ಲಿ ಸನ್ಮಂಗಳವನ್ನು ಉಂಟುಮಾಡುತ್ತಾನೆ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ, ಸುಧಾರಾಣಿ ಲಕ್ಷ್ಮೀನಾರಾಯಣ ಅವರು ಮಾತನಾಡಿ, ಶ್ರೀ ಕೃಷ್ಣ ಜನನದ ದಿನ ಚಂದ್ರಮಾನ ಕೃಷ್ಣ ಪಕ್ಷದಂದು. ರಾಕ್ಷಸನ ಸಂಹಾರಕ್ಕೆ ಜನ್ಮ ತಾಳಿ, ಭಗವದ್ಗೀತೆಯ ಮೂಲಕ ಮಾನವನ ಬದುಕನ್ನು ಸಾರ್ಥಕ ಪಡಿಸುವ ಬಗ್ಗೆ ತಿಳಿಸಿಕೊಟ್ಟವರು. ಬಾಲ್ಯದಿಂದಲೂ ತುಂಟಾಟಗಳ ಮೂಲಕ ಮನುಷ್ಯನಿಗೆ ಮುಕ್ತಿಯನ್ನು ಪಡೆಯುವ ದಾರಿ ತೋರಿದ ಪುಣ್ಯಾತ್ಮ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಎಸ್. ಸ್ವರೂಪ್, ಆಡಳಿತಾಧಿಕಾರಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ. ಹಾಗೂ ಶಿಕ್ಷಕ ವೃಂದ ಹಾಜರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!