ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿಯೋರ್ವನ ಶವ (Person’s dead body) ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ.
ಈ ಕುರಿತು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ನೆರವಿನೊಂದಿಗೆ ಶವವನ್ನು ಹೊರತೆಯಲಾಗಿದೆ.
ಮೃತನನ್ನು ಕೆಳಗಿನಜೋಗಾನಹಳ್ಳಿ ನಿವಾಸಿ ಮುನಿಕೃಷ್ಣ (43 ವರ್ಷ) ಎಂದು ಗುರುತಿಸಲಾಗಿದೆ.
ಮೃತನು ಮೂರು ದಿನಗಳ ಹಿಂದೆ ಕಾಣೆಯಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಆದರೆ. ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದೆ.
ಆತ್ಮಹತ್ಯೆಯೇ.? ಕಾಲು ಜಾರಿ ಬಿದ್ದಿರುವುದೇ ಪೊಲೀಸ್ ತನಿಖೆಯಲ್ಲಿ ತಿಳಿದು ಬರವೇಕಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.