DCM D.K. Shivakumar City Rounds at midnight

ಗುಡ್ಮಾರ್ನಿಂಗ್ ನ್ಯೂಸ್: ಮಧ್ಯರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ಸಿಟಿರೌಂಡ್ಸ್..!| Video

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ.‌ ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆಪ್ ನಲ್ಲಿ ನಾಗರೀಕರು ದೂರುಗಳನ್ನು ಸಲ್ಲಿಸುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ (D.K. Shivakumar) ತಿಳಿಸಿದರು.

ನಗರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ ನಡೆಸಿದ ವೇಳೆ ಅವರು ಮಾಧ್ಯಮಗಳಿಗೆ ಸೋಮವಾರ ಮಧ್ಯರಾತ್ರಿ ಪ್ರತಿಕ್ರಿಯೆ ನೀಡಿದರು.

ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು.

ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್ ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

‘ರಸ್ತೆ ನಿರ್ಮಾಣ ಮಾಡುವಾಗ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕಲ್ಲವೇ ಎಂಬ ಪ್ರಶ್ನೆಗೆ,’ ಬಾರೀ ವಾಹನಗಳ ಓಡಾಟ, ಮಳೆಗಾಲ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಇರುತ್ತವೆ. ಅದಕ್ಕಾಗಿ ಹಂತ-ಹಂತವಾಗಿ ಕಾಂಕ್ರೀಟ್ ರಸ್ತೆ ಮಾಡಲಾಗುತ್ತಿದೆ. ಇದು 30 ವರ್ಷ ಬಾಳಿಕೆ ಬರಲಿದೆ ಎಂದರು.

‘ಗುಂಡಿಗಳಿಂದಲೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ’, ‘ಹೆಣ್ಣು ಮಕ್ಕಳನ್ನು, ಚಿಕ್ಕ ಮಕ್ಕಳನ್ನು ಕರೆದೊಯ್ಯುವಾಗ ತೊಂದರೆಗಳಾಗುವುದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ರಸ್ತೆ ಗುಂಡಿಗಳ ಮೇಲ್ಚಿಚಾರಣೆಗಾಗಿಯೇ ರಸ್ತೆ ಗುಂಡಿ ಗಮನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ’ ಎಂದರು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಮಧ್ಯರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ಸಿಟಿರೌಂಡ್ಸ್..!| Video

ಗುಡ್ಮಾರ್ನಿಂಗ್ ನ್ಯೂಸ್: ಮಧ್ಯರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ಸಿಟಿರೌಂಡ್ಸ್..!| Video

ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ ನಡೆಸಿದ ವೇಳೆ D.K. Shivakumar ಮಾಧ್ಯಮಗಳಿಗೆ ಸೋಮವಾರ ಮಧ್ಯರಾತ್ರಿ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="113106"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!