ಬೆಂ.ಗ್ರಾಂ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ (Women’s helpline center) ತೆರದಿದ್ದು, ಇದು ದಿನದ 24/7 ಕಾರ್ಯನಿರ್ವಹಿಸುತ್ತದೆ.
ಒತ್ತಡ ಮತ್ತು ಹಿಂಸೆಯಿಂದ ಬಾಧಿತಾರದ ಮಹಿಳೆಯರು ರಾಷ್ಟ್ರೀಯ ಟೋಲ್ ಫ್ರೀ ಸಂಖ್ಯೆ 181 ಕ್ಕೆ ಕರೆ ಮಾಡಬಹುದು. ಹಾಗೇ ಸಖಿ ಒನ್ ಸ್ಟಾಪ್ ಸೆಂಟರ್ ಕೇಂದ್ರದಲ್ಲಿ ವೈದ್ಯಕೀಯ ನೆರವು, ಆಪ್ತ ಸಮಾಲೋಚನೆ, ಪೊಲೀಸ್ ನೆರವು, ಕಾನೂನು ಸಲಹೆ ಹಾಗೂ ತಾತ್ಕಾಲಿಕ ವಸತಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.