
ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಾವೀನ್ಯತೆ, ತಾರ್ಕಿಕ,ಕ್ರೀಡೆ, ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ (Hoysala and Keladi Chennamma Awards) ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ 5 ರಿಂದ 18 ವರ್ಷ ವಯೋಮಿತಿಯೊಳಗಿರುವ ಮಕ್ಕಳು ನಿಗದಿ ಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 25 ರೊಳಗೆ ಸಲ್ಲಿಸತಕ್ಕದ್ದು.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ:206, 2 ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ ಸಂ: 080-29787445, ದೇವನಹಳ್ಳಿ-080-27682268, ದೊಡ್ಡಬಳ್ಳಾಪುರ-08027625228, ಹೊಸಕೋಟೆ-080-27931493, ನೆಲಮಂಗಲ-080-2772217 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						