No black spot for Dharmasthala: Nikhil Kumaraswamy

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ಸಹಿಸಲ್ಲ: ಆ.31 ರಂದು ಧರ್ಮಸ್ಥಳ ಸತ್ಯ ಯಾತ್ರೆಗೆ ನಿಖಿಲ್ ಕುಮಾರಸ್ವಾಮಿ ಕರೆ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು.

ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಭಾನುವಾರ 31 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ.ಧರ್ಮಸ್ಥಳಕ್ಕೆ ಅಪಮಾನ ಆಗುವ ತರ ಕೆಲವೊಂದು ಹೆಜ್ಜೆ ಈ ಸರ್ಕಾರ ಇಟ್ಟಿದೆ. ನಾನು ಒಬ್ಬ ಭಕ್ತನಾಗಿ ಹಾಗೂ ನಮ್ಮ ಪಕ್ಷ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಧರ್ಮಸ್ಥಳ ಸತ್ಯ ಯಾತ್ರೆ ಮಾಡಿ, ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಅವರಿಗೆ ಬೆಂಬಲ ನೀಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

800 ವರ್ಷಗಳ ಇತಿಹಾಸವಿರುವ ಪುಣ್ಯಕ್ಷೇತ್ರ ಧರ್ಮಸ್ಥಳ. ಕೋಟ್ಯಾಂತರ ಭಕ್ತರು ಶ್ರೀ ಕ್ಷೇತ್ರಕ್ಕೆ ಹೋಗ್ತಾರೆ. ಅದರಲ್ಲಿ ನಾನು ಸಹ ನಿರಂತರವಾಗಿ ಭೇಟಿ ನೀಡಿದ್ದೇನೆ. ಧರ್ಮಸ್ಥಳದಲ್ಲಿ ಧರ್ಮ, ನ್ಯಾಯವಿದೆ ಇಂತಹ ಶ್ರೀ ಕ್ಷೇತ್ರ ಬಗ್ಗೆ ಪಿತೂರಿ ನಡೆದಿದೆ. ಇದರ ಹಿಂದೆ ಒಂದು ಸಂಘಟನೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು

ಧರ್ಮಸ್ಥಳ ಪ್ರಕರಣದಲ್ಲಿ ‌ಸರ್ಕಾರ ತನಿಖೆ ಯಾವ ರೀತಿ ಮಾಡಿದ್ದಾರೆ. ಪಾರದರ್ಶಕವಾಗಿ ತನಿಖೆ ನಡೆಯಿದೀಯ.?ಇದರ ಹಿಂದೆ ಯಾರಿದ್ದಾರೆ. ಈ ಎಪಿಸೋಡ್ ಹಿಂದೆ ಇರುವ ಕಥೆ, ಚಿತ್ರಕಥೆ, ನಿರ್ಮಾಪಕ ಯಾರು ಅಂತ ಪತ್ತೆ ಮಾಡಬೇಕು. ಇದನ್ನ ಪತ್ತೆ ಮಾಡಬೇಕಾದರೆ ಎನ್ಐಎ ತನಿಖೆ ನಡೆಯಬೇಕು. ಧರ್ಮಸ್ಥಳ ಮಂಜುನಾಥನಿಗೆ ಕೋಟ್ಯಾಂತರ ಭಕ್ತರು ಇದ್ದಾರೆ. ನಾವು ಅವರ ಜೊತೆ ಇದ್ದೇವೆ ಎಂದ ನಿಖಿಲ್ ಅವರು ಹೇಳಿದರು.

ಧರ್ಮಸ್ಥಳ ಯಾತ್ರೆಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಕ್ಷಾತೀತವಾಗಿ ಈ ಯಾತ್ರೆ ಕೈಗೊಂಡಿದ್ದೇವೆ. ಇದ್ರಲ್ಲಿ ಯಾವುದೇ ರಾಜಕೀಯವಿಲ್ಲ. ಧರ್ಮಸ್ಥಳಕ್ಕೆ ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತೇವೆ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಕ್ಕೆ ಒಂದುವರೆ ತಿಂಗಳಿಂದ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಅವರ ಕುಟುಂಬದವರು ತಾಳ್ಮೆಮತ್ತೆ ಸಹನೆಯಿಂದ ನಡೆದುಕೊಂಡಿದ್ದಾರೆ. ನಾವು ಅವರ ಜೊತೆ ನಿಲ್ಲುತ್ತೇವೆ ಹೆಗ್ಗಡೆ ಕುಟುಂಬಕ್ಕೆ ಜೆಡಿಎಸ್ ಬೆಂಬಲವಿದೆ ಎಂದರು.

ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಮಾನ ಹಾಗೂ ಹಲವಾರು ಅನುಮಾನಗಳಿಗೆ ರಾಜ್ಯ ಸರ್ಕಾರ ಎಡೆ ಮಾಡಿಕೊಟ್ಟಿದೆ. ತರಾತುರಿಯಲ್ಲಿ ಎಸ್ಐಟಿ ರಚನೆ ಮಾಡಿದೆ. ಧರ್ಮಸ್ಥಳ ವಿಚಾರವಾಗಿ ಒಂದು ತಂಡವಾಗಿ ಪಿತೂರಿ ಮಾಡಿದ್ದನ್ನು ನೋಡಿದ್ದೇವೆ. ಒಬ್ಬ ಹೇಳಿಕೆಯನ್ನ ಪರಿಗಣಿಸಿ ಎಸ್ಐಟಿ ಯನ್ನ ಯಾಕೆ ರಚನೆ ಮಾಡಿದ್ರು.? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಸ್ಕ್ ಮ್ಯಾನ್ ಬಂದು ಒಂದು ಬುರುಡೆ ಇದೆ.ಅನೇಕ ಕೊಲೆಗಳಾಗಿವೆ ಅಂತ ಹೇಳಿದ್ರೆ. ಅವನ ಮಾತು ಕೇಳಿ ಸರ್ಕಾರ ಎಸ್ಐಟಿ ರಚನೆ ಮಾಡ್ತಾರೆ. 17 ಕಡೆ ಅಗಿದಿದ್ದಾರೆ, ಆ ನಂತರ ಮಾಸ್ಕ್ ಮ್ಯಾನ್ ಉಲ್ಟಾ ಹೊಡೆದಿದ್ದಾನೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಧರ್ಮಸ್ಥಳ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮ , ಯೂಟ್ಯೂಬರ್ಸ್ ಗಳು ನಿರಂತರವಾಗಿ ಸುದ್ದಿ ಮಾಡಿದ್ದಾರೆ. ಇದರ ಹಿಂದೆ ಹಣ ಖರ್ಚು ಮಾಡಿದರ ಬಗ್ಗೆ ತನಿಖೆ ಆಗಬೇಕು. ಅದರಲ್ಲಿ ಸರ್ಕಾರ ಅರ್ಥ ಸತ್ಯ ಹೇಳಿದೆ ಚರ್ಚೆ ಮಾಡುತ್ತಿದ್ದಾರೆ. ಆದರೆ ನಾನು ಹೇಳ್ತೀನಿ ಸರ್ಕಾರ 1% ಎಸ್ಐಟಿ ತನಿಖೆ ಬಗ್ಗೆ ಸತ್ಯ ಹೇಳಿಲ್ಲ. ಈ ಷಡ್ಯಂತ್ರದ ಹಿಂದೆ ಇರೋರನ್ನ ಪತ್ತೆ ಮಾಡಬೇಕಾದ್ರೆ ಎನ್ಐಎ ತನಿಖೆ ಮಾಡಬೇಕೆಂದು ಒತ್ತಾಯಿಸಿದರು.

ಆಗಸ್ಟ್ 31ರಂದು ಧರ್ಮಸ್ಥಳ ಸತ್ಯ ಯಾತ್ರೆ ಆರಂಭವಾಗುತ್ತೆ. ಮೊದಲಿಗೆ ಹಾಸನದಲ್ಲಿ ಸೆಂಟರ್ ಮಾಡಿದ್ದೇವೆ. ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದಾರೆ. ಅಲ್ಲಿ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ನೇತ್ರಾವತಿಗೆ ಹೋಗಿ ಅಲ್ಲಿಂದ ಪಾದಯಾತ್ರೆ ಮಾಡ್ತೇವೆ. ಅಲ್ಲಿ ವೇದಿಕೆ ರಚನೆ ಮಾಡಿದ್ದೇವೆ. ಅಲ್ಲಿಂದ ಕೆಲವು ಸಂದೇಶ ನೀಡುತ್ತೇವೆ ಎಂದು ತಿಳಿಸಿದರು.

ಕುಮಾರಣ್ಣ ದೆಹಲಿಯಲ್ಲಿ ಇದ್ದರು ವೀರೇಂದ್ರ ಹೆಗ್ಗಡೆ ಜೊತೆ ಮಾತನಾಡಿ ನೈತಿಕ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಶಾಸಕರೇ ನಾವು ಮಾಡ್ತಾ ಇರೋದು ತಪ್ಪು ಅಂತ ಚರ್ಚೆ ಮಾಡ್ತಾರೆ. ಮಾಸ್ಕ್ ಮ್ಯಾನ್ ಯಾರು.? ಅವರ ಹಿನ್ನೆಲೆ ಏನು ಅಂತ ಪತ್ತೆ ಮಾಡಬೇಕಿತ್ತು ಎಂದು ತಿಕ್ಷಣವಾಗಿ ಉತ್ತರಿಸಿದರು.

ಪ್ರಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಎಸ್ಐಟಿ ರಚನೆಗೆ ಮನಸ್ಸು ಇರಲಿಲ್ಲ. ಅಮೇಲೆ ಸಿಎಂ ಜೊತೆ ಒಡನಾಟ ಇರುವ ವ್ಯಕ್ತಿಗಳು ಸಿಎಂಗೆ ಒತ್ತಡ ಹಾಕಿ ಎಸ್ಐಟಿ ರಚನೆ ಮಾಡಿದ್ರು. ಮಾಸ್ಕ್ ಮ್ಯಾನ್ ಆರೋಪ ಮಾಡಿದಾಗ ಅವನ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಬೇಕಿತ್ತು ಅದನ್ನ ಸರ್ಕಾರ ಮಾಡಿಲ್ಲ ಎಂದು ಕಿಡಿ ಕಾರಿದರು.

ಧರ್ಮಸ್ಥಳ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ವಿವಾದ ವಿಚಾರಕ್ಕೆ ಮಾತನಾಡಿದ ಅವರು. ಒಬ್ಬ ಮಹಿಳೆ ಬೂಕರ್ ಪ್ರಶಸ್ತಿಯನ್ನು ಪಡೆದುಕೊಂಡವರು. ಈಗ ಅದು ಎಲ್ಲಿಗೆ ಬಂದು ನಿಂತಿದೆ. ಅವರು ಉದ್ಘಾಟನೆಗೆ ನಾವೆಲ್ಲಾ ಗೌರವ ಕೊಡ್ತೇವೆ. ಅದೇ ಗೌರವ ಕನ್ನಡಾಂಬೆ ಮೇಲೆ, ಅರಿಶಿನ ಕುಂಕುಮದ ಮೇಲೆ ನಮ್ಮ ಭುವನೇಶ್ವರಿ ಕುಮಾರಿ ಅವರು ಒಂದು ರಿಸರ್ವೇಶನ್ ಇಟ್ಕೊಂಡಿದ್ದಾರಲ್ಲ ಅದಕ್ಕೆ ನಮಗೆ ಆಕ್ಷೇಪ ಇದೆ ಎಂದರು.

ಬಹಳ ಜನ ಸಾಧಕರು ಸಾಹಿತಿಗಳು ತುಂಬಾ ಜನ ನಮ್ಮ ಧರ್ಮದಲ್ಲೇ ಇದ್ದಾರೆ. ಪ್ರತಿ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವಿವಾದಗಳನ್ನು ಸೃಷ್ಟಿ ಮಾಡ್ತಿದೆ. ಧರ್ಮಸ್ಥಳ ಪ್ರಕರಣ ಆಯ್ತು, ಈಗ ಚಾಮುಂಡೇಶ್ವರಿ ತಾಯಿಗೆ ಕೈ ಹಾಕಿದ್ದಾರೆ ಮುಂದೆ ಯಾವ ಯಾವ ಧಾರ್ಮಿಕ ಕೇಂದ್ರಗಳಿಗೆ ಕೈ ಇಡ್ತಾರೆ ಗೊತ್ತಿಲ್ಲ ಎಂದು ಗುಡುಗಿದರು.

ಗೊಂದಲ ಸೃಷ್ಟಿ ಮಾಡೋದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇದರ ಅವಶ್ಯಕತೆ ಇರಲಿಲ್ಲ ಕನ್ನಡಾಂಬೆ ಬಗ್ಗೆ ಬಾನು ಮುಸ್ತಾಕ್ ಅವರಿಗೆ ರಿಸರ್ವೇಶನ್ ಇದೆ. ಅದರ ಬಗ್ಗೆ ನಮ್ಮ ಆಕ್ಷೇಪ ಇದೆ ನಾವು ವಿರೋಧ ಮಾಡ್ತಿಲ್ಲ. ಅವರು ಮುಸ್ಲಿಂ ಮಹಿಳೆ ಆಗಿರಬಹುದು ಅಥವಾ ಅವರ ಸಾಧನ ಬಗ್ಗೆ ಗೌರವಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಸಿ.ಬಿ ಅವರು, ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಟಿ.ಎ ಶರವಣ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ ಅವರು, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಮೇಶ್ ಗೌಡ ಅವರು, ಶಿರಾ ಉಗ್ರೇಶ್ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!