
ಬೆಂಗಳೂರು: RCB (Royal challengers bengaluru) ವಿಜಯೋತ್ಸವದ ವೇಳೆ ಜೂ.4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿದಲ್ಲಿ 11 ಮಂದಿ ಸಾವನಪ್ಪಿರುವ ಘಟನೆ ವ್ಯಾಪಕ ಆಕ್ರೋಶ, ಬೇಸರಕ್ಕೆ ಕಾರಣವಾಗಿತ್ತು.
ಘಟನೆ ಸಂಭವಿಸಿದ 3 ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್.ಬೆಂಗಳೂರು ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಮಾಡಿದೆ.
RCB ಪೊಸ್ಟ್: ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ.
ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ.
ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.
ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ಧವಲ್ಲ, ಅದು ಶ್ರದ್ದೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ.
ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ದೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.
ಅದರ ಫಲವೇ ಆರ್‌ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.
ಇಂದು ನಾವು ಮರಳಿದ್ದೇವೆ; ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.
ಆರ್‌ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.
ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ. ಎಂದು ಬರೆದಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						