ದೊಡ್ಡಬಳ್ಳಾಪುರ: ಶಂಕುಸ್ಥಾಪನೆಗೊಂಡ ಜಿಲ್ಲಾಸ್ಪತ್ರೆ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಸ್ಪತ್ರೆ ಹೋರಾಟ ಸಮಿತಿಯ ಸದಸ್ಯರು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
‘2013-14ರ ಸಾಲಿನ ಬಜೆಟ್‌ನಲ್ಲಿ ಜಿಲ್ಲಾ ಆಸ್ಪತ್ರೆ ವಿಚಾರ ಪ್ರಸ್ತಾಪ ಆಗಿತ್ತು. ಆದರೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಕಾರಣದಿಂದ ಸಾಧ್ಯವಾಗಲಿಲ್ಲ. 2018-19 ರಲ್ಲಿ ಜಿಲ್ಲಾ ಆಸ್ಪತ್ರೆಯು ಕೆಸಿ ಜನರಲ್ ಆಸ್ಪತ್ರೆಗೆ ವರ್ಗಾಯಿಸುವ ಪ್ರಸ್ತಾವನೆ ಬಂದಿತ್ತು. ಈ ಹಿಂದೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಆಸ್ಪತ್ರೆ ಇಲ್ಲಿಯೇ ಉಳಿಯುವಂತೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳು ಇವೆ. ಆದರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಲ್ಲದೇ ಇರುವುದರಿಂದ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿಯೇ ನಿರ್ಮಿಸುವಂತೆ ಆರೋಗ್ಯ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು.
ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಸ್ಪತ್ರೆ ಹೋರಾಟ ಸಮಿತಿಯ ಸದಸ್ಯರು ಇದ್ದರು.