ದೊಡ್ಡಬಳ್ಳಾಪುರ: ನಾಗರಹಾವು (Cobra) ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನು ಗೆದ್ದು (Survived death) ಬಂದಿದ್ದಾನೆ.
ಇದೇ ತಿಂಗ 23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿವಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್‌ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಮಗು ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಜೊತೆಯಲ್ಲೇ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದು, ವೈದ್ಯಕೀಯ ಸಿಬ್ಬಂದಿಗಳಲ್ಲಿ ಸಾರ್ಥಕತರ ಕಂಡುಬಂತು.