ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ (Ganesh immersion procession) ವೇಳೆ ಪಟಾಕಿಗಳು ಸಿಡಿದು ಅವಘಡ (Firecracker mishap) ಸಂಭವಿಸಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿದೆ.
ಇಂದು ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರಾಕ್ಟರ್‌ನಲ್ಲಿ ಮೆರವಣಿಗೆ ಬರುವ ವೇಳೆ, ಬ್ಯಾನರ್ ಮೆರವಣಿಗೆ ಮಾಡಲು ಕರೆಸಲಾಗಿದ್ದ ಪವರ್ ಲಿಪ್ಟರ್ ವಾಹನ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಪೋಟಗೊಂಡಿವೆ.

ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿದೆ. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 10 ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದಲ್ಲಿಯೇ ಇರುವ ಆಧ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳೆ ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.