ದೊಡ್ಡಬಳ್ಳಾಪುರ: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ ದೊಡ್ಡಬೆಳವಂಗಲ ಬಳಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಅಜ್ಜನಕಟ್ಟೆ ನಿವಾಸಿ 55 ವರ್ಷದ ನಟರಾಜು ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ದೊಡ್ಡಬೆಳವಂಗಲದ ಅಜ್ಜನಕಟ್ಟೆ ಬಳಿ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಈ ವೇಳೆ ಗಂಭೀರವಾಗಿ ಗಾಯಗೊಂಡ ನಟರಾಜ್ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.