Increase in cash awards for medal winners in national sports events: Cmsiddaramaiah

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಗುರುವಾರ ಸಂಜೆ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ
38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು ಮುಖ್ಯಮಂತ್ರಿಗಳು ಹಾರೈಸಿದರು.

2015 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು ನಮ್ಮ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯವರು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರವನ್ನು ಹೆಚ್ಚಿಸಬೇಕೆಂದು ಕೋರಿದ್ದರು. ಅದರಂತೆ ಮನವಿಯನ್ನು ಪುರಸ್ಕರಿಸಿ, ಗೆದ್ದ ಪ್ರತಿಯೊಬ್ಬ ಪದಕ ವಿಜೇತರಿಗೂ ನಗದು ಪುರಸ್ಕಾರವನ್ನು ನೀಡಲು ತೀರ್ಮಾನಿಸಿರುವುದಾಗಿ ಸಿಎಂ ತಿಳಿಸಿದರು.

ಕ್ರೀಡಾಕ್ಷೇತ್ರಕ್ಕೆ ಸರ್ಕಾರದ ಬೆಂಬಲ

ಕ್ರೀಡಾಪಟುಗಳು ಪದಕ ಗೆಲ್ಲಲು ಸಹಕರಿಸುವ ಮ್ಯಾನೇಜರ್ ಹಾಗೂ ತರಬೇತುದಾರರಿಗೂ ನಗದು ಪುರಸ್ಕಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಕೈಗೊಳ್ಳುವಂತೆ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ -1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ ಎಂದರು.

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ಬಹುಮಾನ

ಬಜೆಟ್ ನಲ್ಲಿ ಘೋಷಿಸಿರುವಂತೆ ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು ಇದು ಆಮಿಷವಲ್ಲ, ಪ್ರೋತ್ಸಾಹ ಎಂದರು.

ಬಹುಮಾನ ಗೆದ್ದರೆ ಅದಕ್ಕಿಂತ ಸಂತೋಷ ಕೊಡುವ ವಿಚಾರ ಮತ್ತೊಂದಿಲ್ಲ. ಸೋಲು ಗೆಲುವು ಇದೆ ಇರುತ್ತದೆ, ಆದರೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ಸಾಮರ್ಥ್ಯವಿದ್ದರೂ ಮಾತ್ರ ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕೆಂದು ಸಲಹೆ ನೀಡಿದರು.

ಉದ್ಯೋಗ ಮತ್ತು ನಾಡಿನ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು. ನೀವು ಇಡೀ ರಾಜ್ಯದ ಹೆಮ್ಮೆ. ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದರೆ ಅದು ರಾಜ್ಯಕ್ಕೆ ದೊರೆಯುವ ಗೌರವ ಎಂದರು.

ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ತರಬೇತಿ

ದೇಶದಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಕ್ರೀಡಾಪಟುಗಳು ಇನ್ನಷ್ಟು ಎತ್ತರಕ್ಕೆ ಹೋಗಬೇಕು. ಕಾಮನ್ ವೆಲ್ತ್ ಗೇಮ್ಸ್, ಒಲಂಪಿಕ್ಸ್, ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಬೇಕು. ಶ್ರದ್ಧೆ, ಏಕಾಗ್ರತೆಯಿಂದ ಪ್ರಯತ್ನ ಮಾಡಿದರೆ ಕಷ್ಟವೇನಿಲ್ಲ ಎಂದರು. ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರೆ ಎಲ್ಲವೂ ಸಾಧ್ಯ. ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಅರವತ್ತು ಕ್ರೀಡಾಪಟುಗಳಿಗೆ ತರಬೇತಿ ನೀಡಲು 10 ಲಕ್ಷ ರೂ. ಗಳನ್ನು ಸರ್ಕಾರ ನೀಡುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಮತ್ತು ಶಾಸಕರಾದ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!