ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ (Science seminar) ಮತ್ತು ವಿಜ್ಞಾನ ನಾಟಕ ಸ್ಪರ್ಧೆಯನ್ನು (Science drama competition) ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿವಿಧ ಪ್ರೌಢಶಾಲೆಗಳಿಂದ ಮಾರ್ಗದರ್ಶಿ ಶಿಕ್ಷಕರೊಂದಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನ ಬಿಂಬಿಸುವ ನಾಟಕಗಳನ್ನು ಮತ್ತು ಕ್ವಾಂಟಮ್ ಸಿದ್ದಾಂತ ಬಗ್ಗೆ ವಿಚಾರಗೋಷ್ಠಿಗಳನ್ನು ಮಂಡಿಸಿದರು.
ಈ ಸ್ಪರ್ಧೆ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗಳನ್ನ ಹುಟ್ಟುಹಾಕಿ, ಯುವ ವಿಜ್ಞಾನಿಗಳನ್ನು ಸೃಷ್ಟಿಸಲು ಒಂದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ವಿಶ್ಲೇಷಣಾ ಪ್ರವೃತ್ತಿ, ವೈಚಾರಿಕ ಗುಣಗಳನ್ನು ಬೆಳೆಸುವ ಸದುದ್ದೇಶದಿಂದ ಭಾರತದ ಭವಿಷ್ಯದ ಯುವ ವಿಜ್ಞಾನಿಗಳನ್ನು ಸೃಜಿಸುವ ಹಿನ್ನಲೆಯಲ್ಲಿ ಮಕ್ಕಳಿಗೆ ಒಂದು ಉತ್ತಮ ವೇದಿಕೆಯಾಗಿದೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಆರ್.ನಾರಾಯಣಸ್ವಾಮಿ, ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿಗ ಹನುಮಂತ ರಾಯಪ್ಪ ಜಿ.ಆರ್., ಬಿಆರ್‌ಪಿಗಳಾದ ಗಂಗಾಧರ್, ಮುದ್ದಗಂಗಯ್ಯ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ವಿ.ಲೋಕೇಶ್ ಚನ್ನವೀರನಹಳ್ಳಿ, ಸಿಆರ್‌ಪಿಗಳಾದ ವೆಂಕಟೇಶ್ ಸಿ.ಆರ್., ರಾಜಶೇಖರ್, ಹನುಮೇಗೌಡ, ಶಿವರಾಜ್ ಮತ್ತಿತರರಿದ್ದರು.