ದೊಡ್ಡಬಳ್ಳಾಪುರ: ಕಾರು ಮತ್ತು ಲಗೇಜ್ ಆಟೋ ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ತಾಲೂಕಿನ ತೂಬಗೆರೆ ಮತ್ತು ಕಾಚಳ್ಳಿ ನಡುವಿನ ಕೆರೆಯ ಕಟ್ಟೆಯ ಮೇಲೆ ಇಂದು ಮಧ್ಯಾಹ್ನ ಸಂಭವಿಸಿದೆ.
ಬಾಳೆಕಾಯಿ ಕತ್ತರಿಸಲು ಆಟೋದಲ್ಲಿ ತೆರಳುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರು ಅಪ್ರಾಪ್ತರು ಸೇರಿ ಓರ್ವ ಯುವಕನಿಗೆ ಗಂಭೀರ ಗಾಯಗಳಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ತೂಬಗೆರೆ ನಿವಾಸಿಗಳಾದ ಮಧು (20 ವರ್ಷ), ಅರ್ಜುನ್ (13 ವರ್ಷ) ಹಾಗೂ ಯಶವಂತ್ (13 ವರ್ಷ) ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೆ ಖಾಸಗಿ ಕಾರಿನಲ್ಲಿ ಗಾಯಾಳುಗಳನ್ನು ಕರೆತಂದು ನಗರದ ಸರ್ಕಾರಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಉಳಿದಂತೆ ಕಾರಿನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.