ದೊಡ್ಡಬಳ್ಳಾಪುರ: ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೌರ್ನಿಂಗ್ ಕೌನ್ಸಿಲಿಂಗ್ ಸದಸ್ಯ ರಾಕೇಶ್, ಇತ್ತೀಚಿನ ದಿನಗಳಲ್ಲಿ ಖಾಸಗಿ ಕಂಪನಿಗಳು ಕೆಲಸ ನಿರ್ವಹಿಸುವ ಕೆಲಸಗಾರರಿಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆಗಳನ್ನು ಕಡ್ಡಾಯಗೊಳಿಸಿದ್ದಾರೆ. ಅಂತೆಯೇ ತಾಂತ್ರಿಕ ವಿದ್ಯಾ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದರು.
ಇದೇ ವೇಳೆ ಮೇಜರ್ ಧ್ಯಾನ್ ಚಂದ್ ಅವರಿಗೆ ಮರಣೋತ್ತವಾಗಿ ಭಾರತದ ಪ್ರತಿಷ್ಠಿತ ಭಾರತರತ್ನ ನೀಡಬೇಕೆಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ವಿಜಯ ಕಾರ್ತಿಕ್.ಪಿ., ಉಪ ಪ್ರಾಂಶುಪಾಲರಾದ ಡಾಕ್ಟರ್ ಶಿವಪ್ರಸಾದ್, ಸಂಪನ್ಮೂಲ ಅಧಿಕಾರಿ ಬಾಬು ರೆಡ್ಡಿ ನಾಗಸಂದ್ರ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ರವಿಕಿರಣ್, ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್‌ಪಿ.ಡಿ., ಹೇಮಂತ್ ಕುಮಾರ್, ಮುರಳಿ, ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಇದ್ದರು.