Peace can be established in society through social commitment of the police: CM Siddaramaiah

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ರಾಜಭವನದಲ್ಲಿ ನಡೆದ, ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ರಾಜಕೀಯ

ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

“ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ: ಡಿ.ಕೆ. ಸುರೇಶ್ (D.K. Suresh)

[ccc_my_favorite_select_button post_id="113464"]
ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ರಾಷ್ಟ್ರಭಕ್ತರ ಬಳಗದಿಂದ 224 ಕಾರುಗಳು ಹಾಗೂ 5 ಟಿ.ಟಿ ವಾಹನದ ಮೂಲಕ ಧರ್ಮಸ್ಥಳಕ್ಕೆ (Dharmasthala) ಧರ್ಮ ರಕ್ಷಾ ಜಾಥಾಗೆ ಮಾಜಿ ಉಪ ಮುಖ್ಯಮಂತ್ರಿ ಕೆ‌.ಎಸ್.ಈಶ್ವರಪ್ಪ (K.S. Eshwarappa) ಚಾಲನೆ

[ccc_my_favorite_select_button post_id="113436"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ಸ್ಕೂಟರ್‌ ಸವಾರನ ಮೇಲೆ ಲಾರಿಯ ಚಕ್ರ ಹರಿದು (Accident), ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ನಡೆದಿದೆ.

[ccc_my_favorite_select_button post_id="113368"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!