ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣೆಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಬೆಂಗಳೂರು ನಗರ ಜಿಲ್ಲೆಯಾಧ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ (Liquor ban) ಜಿಲ್ಲಾಧಿಕಾರಿ ಜಗದೀಶ.ಜಿ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗಣೇಶ ವಿಸರ್ಜನೆ ವೇಳೆ ನಗರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಸಲುವಾಗಿ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ -10(ಬಿ) ರನ್ವಯ ರಂತೆ ಪದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧ ಹೇರಿದ್ದಾರೆ.
ಇದರನ್ವಯ ಆಗಸ್ಟ್ 31 ರಂದು ಬೆಳಗ್ಗೆ 6.00 ಗಂಟೆಯಿಂದ ಸೆಪ್ಟೆಂಬರ್ 01ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಪಾನ ನಿರೋಧ ಜಾರಿಗೊಳಿಸಿ, ಎಲ್ಲಾ ರೀತಿಯ ಮದ್ಯ ಉತ್ಪಾದನೆ, ಮಾರಾಟ ಹಂಚಿಕೆ, ಸಾಗಾಣಿಕೆ, ಶೇಖರಣೆ ಇತ್ಯಾದಿಗಳನ್ನು ನಿಷೇಧಿಸಿ ‘ಒಣದಿನ (Dry Days) ಗಳೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರು ಘೋಷಿಸಿ ಆದೇಶಿಸಿದ್ದಾರೆ.