ಉಜಿರೆ: ಧರ್ಮಸ್ಥಳ (Dharmasthala) ವಿರುದ್ಧ ಅಪಪ್ರಚಾರ ಖಂಡಿಸಿ ನಿನ್ನೆ ಜೆಡಿಎಸ್ ಸತ್ಯಯಾತ್ರೆ ಬೆನ್ನಲ್ಲೇ ಇಂದು ಬಿಜೆಪಿ ನಾಯಕರು ಸೋಮವಾರ ಧರ್ಮಸ್ಥಳ ಚಲೋ ನಡೆಸಿದ್ದಾರೆ.
ಧರ್ಮಸ್ಥಳ ಚಲೋ ಮುಗಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ( B.Y.Vijayendra) ಅವರು ಬಿಜೆಪಿ ಮುಖಂಡರೊಂದಿಗೆ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಕುಸುಮಾವತಿ ಅವರು ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಕಣ್ಣೀರು ಹಾಕಿದರು.
ಕಣ್ಣೀರು ಹಾಕಿದ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಸಂತೈಸಿದ ವಿಜಯೇಂದ್ರ, ಸೌಜನ್ಯ ಹೋರಾಟದಲ್ಲಿ ಜೊತೆಗಿರುತ್ತೇವೆ, ನಿಮ್ಮ ಮಗಳಿಗೆ ನ್ಯಾಯ ದೊರಕುವ ಭರವಸೆ ಇದೆ ಎಂದರು.
ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸೌಜನ್ಯ ತಾಯಿ ಅವರನ್ನು ಭೇಟಿಯಾಗಿದ್ದೇವೆ, ಪ್ರಕರಣ ಕುರಿತು ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಸಿಬಿಐ ಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರೆ ಅದರ ಸಂಪೂರ್ಣ ವೆಚ್ಚ ಬಿಜೆಪಿಯಿಂದ ಭರಿಸುತ್ತದೆ ಎಂದು ಭರವಸೆ ನೀಡಿದರು.
ಧರ್ಮಸ್ಥಳ ಪ್ರಕರಣ ಬಿಜೆಪಿಯ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ
ಬೆಂಗಳೂರು: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ತಿರುಗೇಟು ನೀಡಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು.
ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.
ಈ ಕುರಿತಂತೆ ನಳಿನ್ ಕುಮಾರ್ ಕಟೀಲ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿರುವ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ, ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ.
ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 1, 2025
ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ… pic.twitter.com/ahjbdc4Tf3
ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಸವಾಲು ಎಸೆದಿದ್ದಾರೆ.