ಉಜಿರೆ: ಧರ್ಮಸ್ಥಳ (Dharmasthala) ವಿರುದ್ಧ ಅಪಪ್ರಚಾರ ಖಂಡಿಸಿ ನಿನ್ನೆ ಜೆಡಿಎಸ್ ಸತ್ಯಯಾತ್ರೆ ಬೆನ್ನಲ್ಲೇ ಇಂದು ಬಿಜೆಪಿ ನಾಯಕರು ಸೋಮವಾರ ಧರ್ಮಸ್ಥಳ ಚಲೋಗೆ ಕರೆ ನೀಡಿದ್ದಾರೆ.
ಈಗಾಗಲೇ ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದ ಬಿಜೆಪಿ ಮುಖಂಡರು ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು.
ಈ ಕುರಿತು ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಈ ಆರೋಪಗಳು ಸುಳ್ಳು ಎಂದು ಈಗಾಗಲೇ ಸಾಬೀತಾಗಿದೆ. ನಾವೆಲ್ಲರೂ ಧರ್ಮಸ್ಥಳದೊಂದಿಗೆ ಒಗ್ಗಟ್ಟಾಗಿ ನಿಲ್ಲಲಿದ್ದೇವೆ. ಇದರ ಅಂಗವಾಗಿ ಇಂದು ಧರ್ಮಸ್ಥಳ ಚಲೋ ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಗುವುದು.
ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದ್ದು, ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಎಲ್ಲಾ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಭಕ್ತಾದಿಗಳು, ಆಸ್ತಿಕರು ಭಾಗವಹಿಸಲಿದ್ದಾರೆ ಎಂದರು.