ಬೆಂಗಳೂರು: ಗ್ರಾಮ ಪಂಚಾಯಿತಿ (Grama Panchayat) ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯು ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ ರಾಜ್ಯ ಚುನಾವಣಾ ಆಯೋಗದಿಂದ ಈವರೆವಿಗೂ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ.

ರಾಜ್ಯ ಚುನಾವಣಾ ಆಯೋಗವು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಮೂಲಕ ಸುದ್ದಿಗೋಷ್ಠಿಯನ್ನು ಕರೆದು ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುತ್ತದೆ.
ಅದುದರಿಂದ, ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿಯು ಸುಳ್ಳು ಮಾಹಿತಿಯಾಗಿರುವುದಾಗಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ