ಹೈದರಾಬಾದ್: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬಿಆರ್‌ಎಸ್ (BRS) ಮಂಗಳವಾರ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ಪುತ್ರಿ ಎಂಎಲ್‌ಸಿ ಕೆ. ಕವಿತಾ (K.Kavitha) ಅವರನ್ನು ಪಕ್ಷದಿಂದ ಅಮಾನತು (suspended) ಗೊಳಿಸಿದೆ.
ಕವಿತಾ ಅವರ ತಂದೆ ಮತ್ತು ಬಿಆರ್ಎಸ್ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಪುತ್ರಿ ಕವಿತಾ ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ ರವೀಂದರ್ ರಾವ್ ಮತ್ತು ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕವಿತಾ ಅವರ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಹಾನಿಯನ್ನುಂಟು ಮಾಡುತ್ತಿದ್ದು, ಪಕ್ಷದ ನಾಯಕತ್ವವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದ್ದಾರೆ.